ರಾಜಧಾನಿಯಲ್ಲಿ ಪ್ರಯಾಣಿಕರಿಗೆ ತಟ್ಟಲಿದೆ ಡೀಸೆಲ್ ಕೊರತೆ ಬಿಸಿ – ಬಸ್ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು: ಕಳೆದ ಎರಡು ದಿನಗಳಿಂದ ಡಿಪೋಗಳಲ್ಲಿ ಡೀಸೆಲ್ ಕೊರತೆ ಎದುರಾಗಿದ್ದು, ಇಂದು ನಗರದಲ್ಲಿ ಬಿಎಂಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

ಕಳೆದ ಎರಡು ದಿನಗಳಿಂದ ಡಿಪೋಗಳಲ್ಲಿ ಡೀಸೆಲ್ ಕೊರತೆ ಎದುರಾಗಿದೆ. ಆದರೆ ಇಂದು ಬಹುತೇಕ ಡಿಪೋಗಳಲ್ಲಿ ಡೀಸೆಲ್ ಖಾಲಿ ಆಗುವ ಸಾಧ್ಯತೆ ಇದೆ. ಸಗಟು ಖರೀದಿ ದರ ಎಫೆಕ್ಟ್ನಿಂದ ಬಿಎಂಟಿಸಿ ಅಕ್ಷರಶಃ ತತ್ತರಿಸಿ ಹೋಗಿದ್ದು, ಚಿಲ್ಲರೆ ವ್ಯಾಪಾರಿಗಳಿಂದ ನಿಗಮ ಡೀಸೆಲ್ ಖರೀದಿಸುತ್ತಿತ್ತು. ಆದರೆ ಮೂರು ದಿನದಿಂದ ಚಿಲ್ಲರೆ ವ್ಯಾಪಾರಿಗಳಿಂದಲೂ ಡೀಸೆಲ್ ಸಪ್ಲೈ ಆಗುತ್ತಿಲ್ಲ. ಹೀಗಾಗಿ ಬಿಎಂಟಿಸಿ ಡಿಪೋಗಳಲ್ಲಿ ಭಾರೀ ಡೀಸೆಲ್ ಕೊರತೆ ಎದುರಾಗಿದೆ. ಇದನ್ನೂ ಓದಿ: ಅಂಜನಾದ್ರಿ ಪರ್ವತಕ್ಕೆ ಮೈಸೂರು ರಾಜವಂಶಸ್ಥ ಯದುವೀರ್ ದಂಪತಿ ಭೇಟಿ

ಡೀಸೆಲ್ ಕೊರತೆ ಪರಿಣಾಮ ಇಂದು ಬೆಂಗಳೂರಿನಲ್ಲಿ ಬಹುತೇಕ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಅಲ್ಲದೇ ಓಪನ್ ಮಾರುಕಟ್ಟೆಯಲ್ಲಿ ಡಿಸೇಲ್ ಖರೀದಿಸಲು ಬಿಎಂಟಿಸಿ ಚಿಂತನೆ ನಡೆಸುತ್ತಿದೆ. ಬಸ್ ಸಂಚಾರಕ್ಕೆ ದಕ್ಕೆ ಆಗುವುದನ್ನು ತಡೆಯಲು ಬಿಎಂಟಿಸಿ ಹರಸಾಹಸ ಪಡುತ್ತಿದ್ದು, ಖಾಸಗಿ ಬಂಕ್‌ಗಳಲ್ಲಿ ಡೀಸಲ್ ಹಾಕಿಸಲು ಚಿಂತನೆ ನಡೆಸುತ್ತಿದ್ಯಾ ಎಂಬ ಪ್ರಶ್ನೆ ಮೂಡಿದೆ. ಒಟ್ಟಾರೆ ಇಂದು ಡಿಸೇಲ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳದೇ ಹೋದರೆ ಬಸ್ ಸಂಚಾರಕ್ಕೆ ದೊಡ್ಡ ಹೊಡೆತ ಬೀಳಲಿದೆ. ಇದನ್ನೂ ಓದಿ: ಡಿಸಿ ಕಚೇರಿ ಆವರಣದಲ್ಲಿ ಮೃತದೇಹ ಇಟ್ಟು ಪ್ರತಿಭಟನೆ

Live Tv

Comments

Leave a Reply

Your email address will not be published. Required fields are marked *