SSLC ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದ BMTC

ಬೆಂಗಳೂರು: ಎಸ್ಎಸ್‌ಎಲ್‌ಸಿ (SSLC) ಪರೀಕ್ಷೆ (Exam) ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ (Student) ಉಚಿತ ಪ್ರಯಾಣಕ್ಕೆ ಬಿಎಂಟಿಸಿ (BMTC) ಅವಕಾಶ ಕಲ್ಪಿಸಿದೆ.

ಮಾರ್ಚ್ 31ರಿಂದ ಏಪ್ರಿಲ್ 15ರ ವರೆಗೆ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ನೆರವಿಗಾಗಿ ಬಿಎಂಟಿಸಿ ನಿರ್ಧಾರ ಮಾಡಿದೆ. ಈ ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ಉಚಿತ ಪ್ರಯಾಣಕ್ಕೆ ಅನುಮತಿ ನೀಡಿದೆ. ಇದನ್ನೂ ಓದಿ: ಬ್ರಿಟನ್‍ನ 36 ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ ಇಸ್ರೋ

SSLC

ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸುವುದು ಕಡ್ಡಾಯವಾಗಿದೆ. ಪರೀಕ್ಷೆಯ ದಿನ ಪರೀಕ್ಷಾ ಕೇಂದ್ರ ಮಾರ್ಗದಲ್ಲಿ ಬಸ್ ಸಂಚರಿಸುವುದಾಗಿ ಬಿಎಂಟಿಸಿ ಪ್ರಕಟಣೆಯನ್ನು ಬಿಡುಗಡೆ ಮಾಡಿದೆ. ಜೊತೆಗೆ ಹೆಚ್ಚುವರಿ ಅಗತ್ಯವಿದ್ದಲ್ಲಿ ಬಸ್‌ ಇದ್ದರೇ ಕ್ರಮವಹಿಸಲು ಮುಂದಾಗಿದೆ. ಇದನ್ನೂ ಓದಿ: ಚಾಮುಂಡೇಶ್ವರಿ ಉಪ ಚುನಾವಣೆ ನೆನೆದರೆ ಈಗಲೂ ಬೆಚ್ಚುತ್ತಾರೆ ಸಿದ್ದು!

Comments

Leave a Reply

Your email address will not be published. Required fields are marked *