ಉತ್ತರ ಕರ್ನಾಟಕಕ್ಕೆ ಸಹಾಯ ಮಾಡಿ: ಬಾಲಿವುಡ್ ನಟ ಮನವಿ

ಬೆಂಗಳೂರು: ಉತ್ತರ ಕರ್ನಾಟಕ ಹಾಗೂ ರಾಜ್ಯದ ಇತರೇ ಜಿಲ್ಲೆಗಳು ಭೀಕರ ಪ್ರವಾಹ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕಕ್ಕೆ ಸಹಾಯ ಮಾಡಿ ಎಂದು ಬಾಲಿವುಡ್ ನಟ ಕಬೀರ್ ದುಹಾನ್ ಸಿಂಗ್ ಮನವಿ ಮಾಡಿಕೊಂಡಿದ್ದಾರೆ.

ಕಬೀರ್ ಸಿಂಗ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ಪ್ರವಾಹದಿಂದ ಸಿಲುಕಿರುವ ಉತ್ತರ ಕರ್ನಾಟಕ ಜನರಿಗೆ ದಯವಿಟ್ಟು ಸಹಾಯ ಮಾಡಿ. ಯಾವುದೇ ರೀತಿಯಲ್ಲಿ ಬೇಕಾದರೂ ಸಹಾಯ ಮಾಡಿ” ಎಂದು ಟ್ವೀಟ್ ಮಾಡುವ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಕಬೀರ್ ಅವರ ಟ್ವೀಟ್‍ಗೆ ಅಭಿಮಾನಿಗಳು ನಾವು ಅವರ ಜೊತೆ ಇದ್ದೇವೆ ಎಂದು ರೀ-ಟ್ವೀಟ್ ಮಾಡುವ ಮೂಲಕ ಸ್ಪಂದಿಸಿದ್ದಾರೆ. ಕಬೀರ್ ಸಿಂಗ್ ಅವರು ಈ ಹಿಂದೆ ಕಿಚ್ಚ ಸುದೀಪ್ ಅವರ ಜೊತೆ ‘ಹೆಬ್ಬುಲಿ’ ಚಿತ್ರದಲ್ಲಿ ಖಳನಾಯಕನ ಪಾತ್ರದಲ್ಲಿ ನಟಿಸಿದ್ದರು.

ಗೋಲ್ಡನ್ ಸ್ಟಾರ್ ಗಣೇಶ್ ಅವರು ಕೂಡ ತಮ್ಮ ಟ್ವಿಟ್ಟರಿನಲ್ಲಿ, “ನಮ್ಮ ಕರ್ನಾಟಕದ ನೆಲವನ್ನು ಬಹುಪಾಲು ಜಲ ಆವರಿಸಿಕೊಂಡಿದೆ. ಪ್ರವಾಹದ ಅಬ್ಬರಕ್ಕೆ ಉತ್ತರ ಕರ್ನಾಟಕ ತತ್ತರಿಸಿದೆ. ಸಂಕಷ್ಟದಲ್ಲಿ ಇರುವವರಿಗೆ ಸಹಾಯ ಹಸ್ತ ಚಾಚುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ನಮ್ಮಿಂದ ಸಾಧ್ಯವಾದದ್ದನ್ನು ನೆರೆ ಸಂತ್ರಸ್ತರಿಗೆ ತಲುಪಿಸೋಣ. ಇದು ನನ್ನ ಹೃದಯಾಂತರಾಳದ ಕೋರಿಕೆ” ಎಂದು ಟ್ವೀಟ್ ಮಾಡಿದ್ದಾರೆ.

ಗಣೇಶ್ ಅಲ್ಲದೆ ಸ್ಯಾಂಡಲ್‍ವುಡ್ ಕಲಾವಿದರಾದ ದರ್ಶನ್, ಸುದೀಪ್, ಜಗ್ಗೇಶ್, ಶ್ರೀಮುರಳಿ, ಚಂದನ್ ಶೆಟ್ಟಿ, ಉಪೇಂದ್ರ ಸೇರಿದಂತೆ ಹಲವರು ಉತ್ತರ ಕರ್ನಾಟಕಕ್ಕೆ ಸಹಾಯ ಮಾಡುವಂತೆ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

Comments

Leave a Reply

Your email address will not be published. Required fields are marked *