ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಬಾಲಿವುಡ್ ಸ್ಟಾರ್ ನಿರ್ದೇಶಕ ರೋಹಿತ್ ಶೆಟ್ಟಿ ಅವರು ಹೊಗಳಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ನಿರ್ದೇಶಕ ರೋಹಿತ್ ಶೆಟ್ಟಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ದರ್ಶನ್ ಹಾಗೂ ಅವರ ಅಭಿಮಾನಿಗಳ ಬಗ್ಗೆ ಮಾತನಾಡಿದ್ದಾರೆ. ಈ ವಿಡಿಯೋ ಹಳೆಯದಾಗಿದ್ದು, ಸಾಕಷ್ಟು ವೈರಲ್ ಆಗುತ್ತಿದೆ. ಅಲ್ಲದೆ ದರ್ಶನ್ ಅವರ ಅಭಿಮಾನಿಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ವಿಡಿಯೋದಲ್ಲಿ ರೋಹಿತ್ ಶೆಟ್ಟಿ, “ನಾನು ಕನ್ನಡ ನಟನೊಬ್ಬನ ವಿಡಿಯೋ ನೋಡಿದೆ. ಅವರ ಹುಟ್ಟುಹಬ್ಬದ ದಿನ ಸಾವಿರಾರು ಅಭಿಮಾನಿಗಳು ಅವರ ಮನೆ ಮುಂದೆ ನಿಂತಿದ್ದರು. ಮಧ್ಯರಾತ್ರಿ 12 ಗಂಟೆಯಿಂದ ಮರುದಿನ ಮಧ್ಯರಾತ್ರಿ 12 ಗಂಟೆವರೆಗೂ ಅವರು ತಮ್ಮ ಪ್ರತಿಯೊಬ್ಬ ಅಭಿಮಾನಿಯನ್ನು ಭೇಟಿ ಮಾಡಿದ್ದಾರೆ. ಅವರು ತಮ್ಮ ಹುಟ್ಟುಹಬ್ಬದಂದು ಸಾವಿರಾರು ಕೇಕ್ ಕಟ್ ಮಾಡಿರುತ್ತಾರೆ. ಹೀಗೆ ಅವರು ತಮ್ಮ ಅಭಿಮಾನಿಗಳನ್ನು ಹೆಚ್ಚಿಸಿಕೊಳ್ಳುತ್ತಾರೆ” ಎಂದು ಹೇಳಿದ್ದಾರೆ.
ರೋಹಿತ್ ಶೆಟ್ಟಿ ಬಾಲಿವುಡ್‍ನಲ್ಲಿ ‘ಚೆನ್ನೈ ಎಕ್ಸ್ ಪ್ರೆಸ್, ದಿಲ್‍ವಾಲೆ, ಸಿಂಗಂ, ಸಿಂಗಂ ರಿಟನ್ಸ್, ಗೋಲ್‍ಮಾಲ್-3, ಬೋಲ್ ಬಚ್ಚನ್ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ. ಅಲ್ಲದೆ ಅವರ ಸಾಕಷ್ಟು ಚಿತ್ರಗಳು ಸೂಪರ್ ಹಿಟ್ ಆಗಿವೆ.
https://www.instagram.com/p/B43sxqBgZQu/?utm_source=ig_embed

Leave a Reply