ಮದುವೆ ವೇಳೆ ಹೃದಯಾಘಾತದಿಂದ ವಧು ಸಾವು – ತಂಗಿಗೆ ತಾಳಿ ಕಟ್ಟಿದ ವರ

ಗಾಂಧಿನಗರ: ವಧುವೊಬ್ಬಳು (Bride) ಮದುವೆ (Wedding) ದಿನವೇ ಹೃದಯಘಾತದಿಂದ ಮೃತಪಟ್ಟ ಘಟನೆ ಗುಜರಾತಿನ (Gujarat) ಸುಭಾಷ್‍ನಗರದ ಭಾವನಗರದಲ್ಲಿ ನಡೆದಿದೆ.

ಭಾವನಗರದ ಭಗವಾನೇಶ್ವರ ಮಹಾದೇವ ದೇವಸ್ಥಾನದ ಮುಂಭಾಗದಲ್ಲಿ ಈ ಅಹಿತಕರ ಘಟನೆ ನಡೆದಿದೆ. ಜಿನಾಭಾಯಿ ರಾಥೋಡ್ ಎಂಬವರ ಪುತ್ರಿ ಹೇತಾಲ್ ಹಾಗೂ ನಾರಿ ಗ್ರಾಮದ ರಾಣಾಭಾಯ್ ಬೂತಭಾಯ್ ಅಲ್ಗೋಟಾರ್ ಅವರ ಮಗ ವಿಶಾಲ್ ಅವರಿಬ್ಬರಿಗೂ ಮದುವೆ ನಡೆಯುತ್ತಿತ್ತು.

ಮದುವೆಯ ವಿಧಿವಿಧಾನಗಳನ್ನು ನಡೆಸುತ್ತಿದ್ದಾಗ ಹೇತಾಲ್ ತಲೆ ಸುತ್ತಿ ಬಿದ್ದಿದ್ದಾಳೆ. ತಕ್ಷಣ ಆಕೆಯನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಲ್ಲಿ ಹೇತಾಲ್ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಹೇತಾಲ್‍ನ ಸಾವಿನಿಂದ ಕುಟುಂಬ ಶೋಕದಲ್ಲಿದ್ದರೂ ಮದುವೆಯ ಆಚರಣೆಯನ್ನು ಮುಂದುವರಿಸಲು ನಿರ್ಧರಿಸಿದ್ದಾರೆ. ಇದರಿಂದಾಗಿ ಹೇತಾಲ್‍ನ ತಂಗಿಗೆ ವರ ವಿಶಾಲ್ ತಾಳಿ ಕಟ್ಟಿದ್ದಾನೆ. ಸಮಾರಂಭ ಮುಗಿಯುವವರೆಗೂ ಹೇತಲ್ ಅವರ ಮೃತದೇಹವನ್ನು ಕೋಲ್ಡ್ ಸ್ಟೋರೇಜ್‍ನಲ್ಲಿ ಇಡಲಾಗಿತ್ತು ಎಂದು ವರದಿಯಾಗಿದೆ. ಇದನ್ನೂ ಓದಿ: ತಂದೆ, ತಾಯಿಯ ದೇವಸ್ಥಾನ ನಿರ್ಮಿಸಿ ದಿನನಿತ್ಯ ಪೂಜೆ ಸಲ್ಲಿಸುತ್ತಿರುವ ಪುತ್ರ

ಭಾವನಗರ ನಗರದ ಕಾರ್ಪೋರೇಟರ್ ಮತ್ತು ಮಾಲ್ಧಾರಿ ಸಮಾಜದ ಮುಖಂಡ ಲಕ್ಷ್ಮಣಭಾಯ್ ರಾಥೋಡ್ ಮಾತನಾಡಿ, ಘಟನೆಯನ್ನು ಅತ್ಯಂತ ದುಃಖಕರವಾಗಿದೆ. ಮಗಳ ಸಾವಿನಿಂದ ಕುಟುಂಬವು ಆಘಾತಕ್ಕೊಳಗಾಗಿದ್ದರೂ, ವರ ಮತ್ತು ಅವರ ಕುಟುಂಬವನ್ನು ಬರಿಗೈಯಲ್ಲಿ ಕಳುಹಿಸದೆ ಮಾದರಿಯಾಗಿದ್ದಾರೆ ಎಂದರು. ಇದನ್ನೂ ಓದಿ: ಸಿದ್ರಾಮಣ್ಣನಿಗೆ ಕಟು ಸತ್ಯ ಎದುರಿಸುವ ಕಾಲ ಬಂದಿದೆ: ಬೊಮ್ಮಾಯಿ ವಾಗ್ದಾಳಿ

Comments

Leave a Reply

Your email address will not be published. Required fields are marked *