ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ ಆರೋಪ – ಬ್ರಿಜ್ ಭೂಷಣ್ ಸಿಂಗ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಬಿಜೆಪಿ ಸಂಸದ ಮತ್ತು ನಿರ್ಗಮಿತ ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ (Brij Bhushan Sharan Singh) ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಮಧ್ಯಂತರ ಜಾಮೀನು (Interim Bail) ನೀಡಿದೆ. ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಕೋರ್ಟ್ 25,000 ರೂ. ಬಾಂಡ್ ಮೇಲೆ 2 ದಿನದ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಇದೇ ವೇಳೆ ಡಬ್ಲ್ಯುಎಫ್‌ಐನ ಅಮಾನತುಗೊಂಡಿರುವ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್‌ಗೂ ಮಧ್ಯಂತರ ಜಾಮೀನು ನೀಡಲಾಗಿದೆ. ನ್ಯಾಯಾಲಯವು ಗುರುವಾರ ಸಾಮಾನ್ಯ ಜಾಮೀನು ಅರ್ಜಿಯ ವಿಚಾರಣೆ ನಡೆಸಲಿದೆ.

ಕುಸ್ತಿಪಟುಗಳ (Wrestlers) ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆ ಜೂನ್ 2 ರಂದು ದೆಹಲಿ ಪೊಲೀಸರು ಬ್ರಿಜ್ ಭೂಷಣ್ ಸಿಂಗ್ ವಿರುದ್ಧ 10 ದೂರುಗಳನ್ನು ಸ್ವೀಕರಿಸಿ 2 ಎಫ್‌ಐಆರ್ ದಾಖಲಿಸಿದ್ದರು. ದೂರುಗಳಲ್ಲಿ ಅನುಚಿತವಾಗಿ ಸ್ಪರ್ಶಿಸುವುದು, ಹುಡುಗಿಯರ ಎದೆಯ ಮೇಲೆ ಕೈ ಹಾಕುವುದು, ಎದೆಯಿಂದ ಹಿಂದಕ್ಕೆ ತನ್ನ ಕೈಯನ್ನು ಚಲಿಸುವುದು ಮತ್ತು ಅವರನ್ನು ಹಿಂಬಾಲಿಸುವುದು ಇತ್ಯಾದಿಗಳನ್ನು ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ISI ನಂಟಿನ ಶಂಕೆ – ಅಕ್ರಮವಾಗಿ ಭಾರತ ಪ್ರವೇಶಿಸಿದ ಸೀಮಾ ಹೈದರ್ ತೀವ್ರ ವಿಚಾರಣೆ

6 ಬಾರಿ ಸಂಸದರಾಗಿರುವ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪೊಲೀಸರು ಜೂನ್ 15 ರಂದು ಸೆಕ್ಷನ್ 354, 354 ಎ, 354 ಡಿ, ಐಪಿಸಿಯ 506 ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಲೈಂಗಿಕ ದುರುಪಯೋಗದ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ. ಇದನ್ನೂ ಓದಿ: ಕುಸ್ತಿ ಫೆಡರೇಷನ್‌ ಚುನಾವಣೆ – ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]