ಧಾರವಾಡ: ಲಾರಿ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ ಘಟನೆ ಧಾರವಾಡ ಹೊರವಲಯದ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ಧಾರವಾಡ ಹೊರವಲಯದ ಇಟ್ಟಿಗೆ ಗಟ್ಟಿ ಬೈಪಾಸ್ ಬಳಿ ಈ ಘಟನೆ ನಡೆದಿದ್ದು, ಸಾವನ್ನಪ್ಪಿದವರು ಇಬ್ಬರು ಸಹೋದರರು ಎಂದು ತಿಳಿದು ಬಂದಿದೆ. ಸಾವನ್ನಪ್ಪಿದ ದುರ್ದೈವಿಗಳನ್ನು ಸಿದ್ಧಲಿಂಪ್ಪ ಗುಳೆಸಿಂಗಿ (34) ಹಾಗೂ ಮಹೇಶ್ ಗುಳೆಸಿಂಗಿ ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಲಾರಿ ಚಾಲಕ ಕೂಡಾ ಗಾಯಗೊಂಡಿದ್ದು, ಆತನನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಬೆಳಗಾವಿಯಿಂದ ಬರುತ್ತಿದ್ದ ಲಾರಿ ಹುಬ್ಬಳ್ಳಿ ಕಡೆಯಿಂದ ಬೆಳಗಾವಿ ಕಡೆ ಹೊರಟ್ಟಿದ್ದ ಕಾರ್ ನಡುವೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಭೇಟಿ ನೀಡಿದ ಧಾರವಾಡ ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Leave a Reply