ಸಿದ್ದರಾಮಯ್ಯ ಲಿಂಗಾಯತ ಧರ್ಮ ಅಸ್ತ್ರಕ್ಕೆ ಬಿಎಸ್‍ವೈ ಪ್ರತ್ಯಾಸ್ತ್ರ!

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರ ಲಿಂಗಾಯತ ಧರ್ಮ ಅಸ್ತ್ರಕ್ಕೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿ ಅಸ್ತ್ರ ಹೂಡಿದ್ದಾರೆ ಎಂಬ ಮಾಹಿತಿಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ.

ಭಾನುವಾರ ಸಿದ್ದಗಂಗಾ ಮಠದ ಗೆಸ್ಟ್ ಹೌಸ್‍ನಲ್ಲಿ ಬಿಎಸ್‍ವೈ, ಮಾಜಿ ಸಚಿವ, ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಮತ್ತು ಮಾಜಿ ಸಂಸದ ಬಸವರಾಜು ಜೊತೆ ಮಹತ್ವದ ರಹಸ್ಯ ಸಭೆಯನ್ನು ನಡೆಸಿದ್ದಾರೆ.

ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಒಪ್ಪಿಗೆ ಸೂಚಿಸಬಾರದು. ಸಿದ್ದರಾಮಯ್ಯವರು ಸಂಪುಟದಲ್ಲಿ ತೆಗೆದುಕೊಳ್ಳುವ ನಿರ್ಧಾರಗಳಿಗೆ ಬೆಂಬಲ ನೀಡಬಾರದು ಎಂದು ಬಿ.ಎಸ್.ಯಡಿಯೂರಪ್ಪ ಇಬ್ಬರು ನಾಯಕರಿಗೆ ಮನವಿ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಎಸ್‍ವೈರ ಎಲ್ಲ ಮಾತಿಗೂ ಶಾಮನೂರು ಶಿವಶಂಕರಪ್ಪ ಸಮ್ಮತಿ ಸೂಚಿಸಿದ್ದಾರೆ ಅಂತಾ ತಿಳಿದು ಬಂದಿದೆ. ಸಿದ್ದಗಂಗಾ ಮಠದಲ್ಲಿ ಮೂವರು ನಾಯಕರು ಸುದೀರ್ಘ ಒಂದು ಗಂಟೆಗಳ ಕಾಲ ಮಾತುಕತೆ ನಡೆಸಿದ್ದು, ಮುಂದಿನ ದಿನಗಳಲ್ಲಿ ಯಾರು ಯಾವ ನಿರ್ಧಾರ ತೆಗೆದುಕೊಳ್ತಾರೆ ಎಂಬುದನ್ನು ಕಾದುನೋಡಬೇಕಿದೆ.

Comments

Leave a Reply

Your email address will not be published. Required fields are marked *