ಬಜೆಟ್ ಮಂಡನೆ – ಕೋಲಾರದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ

ಕೋಲಾರ: ಇಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸಮ್ಮಿಶ್ರ ಸರ್ಕಾರದ ಎರಡನೇ ಬಜೆಟ್ ಮಂಡನೆ ಮಾಡಿದ್ದಾರೆ. ಈ ವೇಳೆ ಕೋಲಾರಕ್ಕೆ ನೀಡಿದ ಅನುದಾನದ ಹಿನ್ನೆಲೆಯಲ್ಲಿ ಜನರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದಾರೆ.

ಕೋಲಾರ ಜಿಲ್ಲೆಗೆ ಬಜೆಟ್‍ನಲ್ಲಿ ನೀರಾವರಿ, ಟೊಮ್ಯಾಟೊ ಉತ್ಪಾದನಾ ಕೇಂದ್ರ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿ ಯೋಜನೆಗಳನ್ನು ಸಿಎಂ ಕುಮಾರಸ್ವಾಮಿ ಪ್ರಕಟಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೋಲಾರ ಟೊಮ್ಯಾಟೊ ಎಪಿಎಂಸಿ ಮಾರುಕಟ್ಟೆಯಲ್ಲಿ ಮಂಡಿ ಮಾಲೀಕರು, ವರ್ತಕರು ಮತ್ತು ರೈತರಿಂದ ಸಂಭ್ರಮಚಾರಣೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಸಿಎಂ ಕುಮಾರಸ್ವಾಮಿ ಜನಪರವಾದ ಉತ್ತಮ ಬಜೆಟ್ ಮಂಡನೆ ಮಾಡಿದ್ದಾರೆಂದು ಸಂತಸ ಪಟ್ಟಿದ್ದಾರೆ.

ಟೊಮೆಟೋ ಉತ್ಪನ್ನಗಳ ಸಂಸ್ಕರಣಾ ಘಟಕ ಸ್ಥಾಪನೆಗೆ 20 ಕೋಟಿ ರೂ. ಅನುದಾನ ಮಾಡಿದ್ದು, ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಶಿವಾರಪಟ್ಟಣದಲ್ಲಿ ಅಮರಶಿಲ್ಪಿ ಜಕಣಾಚಾರ ಶಿಲ್ಪಕಲಾ ಕೇಂದ್ರ ಪ್ರಾರಂಭಿಸಲು 10 ಕೋಟಿ ರೂ. ಅನುದಾನ ನೀಡಿದ್ದಾರೆ.

ಇನ್ನೂ ರಾಯಚೂರು, ಹಾವೇರಿ, ಮಂಗಳೂರು, ಚಿಕ್ಕಮಗಳೂರು, ಮಂಡ್ಯ, ಚಾಮರಾಜನಗರ, ಕಲಬುರಗಿ, ಹಾಸನ, ಕೋಲಾರ ಮತ್ತು ಧಾರವಾಡ ಜಿಲ್ಲೆಯಲ್ಲಿ ಬಾಲಕಿಯರಿಗೆ ಪ್ರತ್ಯೇಕ ಕ್ರೀಡಾ ವಸತಿ ನಿಲಯ ಸ್ಥಾಪಿಸಲು 15 ಕೋಟಿ ರೂ. ಅನುದಾನ ನೀಡಿದ್ದಾರೆ. ರಾಯಚೂರು, ವಿಜಯಪುರ, ಮಂಡ್ಯ ಮತ್ತು ಕೋಲಾರ ಜಿಲ್ಲೆಗಳಲ್ಲಿ 4000 ಕೋಟಿ ರೂ. ವೆಚ್ಚದಲ್ಲಿ ‘ಜಲಧಾರೆ’ ಮೊದಲ ಹಂತದ ಯೋಜನೆ ಪ್ರಾರಂಭಿಸುವುದಾಗಿ ಹೇಳಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *