ಬೆಂಗಳೂರು: ಸಿಲಿಕಾನ್ ಟಿಸಿಯಲ್ಲಿ ಇತ್ತೀಚೆಗಷ್ಟೇ ನಿರ್ಮಾಣಗೊಂಡಿದ್ದ ಕಟ್ಟಡವೊಂದು ವಾಲಿದ್ದು, ಕುಸಿಯುವ ಭೀತಿಯಲ್ಲಿದೆ.
ನಗರದ ಮಾರತ್‍ಹಳ್ಳಿ ಸಮೀಪದ ಅಶ್ವಥ್ ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡ ಬಹುಮಹಡಿ ಕಟ್ಟಡ ಕುಸಿಯುವ ಭೀತಿಯಲ್ಲಿದೆ. ಈ ಕಟ್ಟಡವೂ ಮೂರು ತಿಂಗಳ ಹಿಂದಷ್ಟೇ ನಿರ್ಮಾಣವಾಗಿತ್ತು. ಸದ್ಯ ಕಟ್ಟಡದಲ್ಲಿ ಪಿಜಿ ನಡೆಸುತ್ತಿದ್ದರು.
ಕಟ್ಟಡದ ಪಿಲ್ಲರ್ ಬಿರುಕು ಬಿಟ್ಟ ಪರಿಣಾಮ ಮತ್ತೊಂದು ಕಟ್ಟಡದ ಮೇಲೆ ವಾಲಿಕೊಂಡು ಕುಸಿಯುವ ಭೀತಿಯಲ್ಲಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕಟ್ಟಡದಲ್ಲಿದ್ದ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರಿಸಿದ್ದಾರೆ. ಈ ವೇಳೆ ಜನರನ್ನು ಚದುರಿಸಲು ಹೆಚ್.ಎ.ಎಲ್ ಪೊಲೀಸರು ಹರಸಾಹಸ ಪಟ್ಟಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply