40 ಅಡಿ ಆಳದ ಬಾವಿಗೆ ಬಿದ್ದ ಹೋರಿ – ರಕ್ಷಿಸಲು ಹರಸಾಹಸ ಪಟ್ಟ ಅಗ್ನಿ ಶಾಮಕ ದಳ

ಚಿಕ್ಕೋಡಿ: ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಕಿರಣಗಿ ಗ್ರಾಮದ ಹೊರವಲಯದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದಿದ್ದ ಹೋರಿಯನ್ನು ಅಥಣಿ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸುವ ಮೂಲಕ ಯಶಸ್ವಿಯಾಗಿ ರಕ್ಷಣೆ ಮಾಡಿದ್ದಾರೆ.

ಕಿರಣಗಿ ಗ್ರಾಮದ ರೈತರಾದ ಬಸಪ್ಪ ಅವರ ಹೋರಿ ಕಾಲುಜಾರಿ ಬಾವಿಗೆ ಬಿದ್ದಿತ್ತು. ತಕ್ಷಣವೇ ಗ್ರಾಮಸ್ಥರು ಅಗ್ನಿಶಾಮಕ ದಳ ಅಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ನೀಡುತ್ತಿದ್ದಂತೆ ಕಾರ್ಯಪ್ರವೃತ್ತರಾದ ಠಾಣಾಧಿಕಾರಿ ರಾಜು ತಳವಾರ ತಂಡ ಸತತ ಮೂರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಜೀವಂತವಾಗಿ ಹೋರಿ ಮೇಲೆ ತೆಗೆದಿದ್ದಾರೆ. ಇದನ್ನೂ ಓದಿ: ಕಾಶ್ಮೀರ ಪಂಡಿತರ ಹತ್ಯಾಕಾಂಡ – ಎಸ್‌ಐಟಿ ತನಿಖೆಗೆ ನಿರ್ದೇಶನ ನೀಡಿ: ರಾಷ್ಟ್ರಪತಿಗಳಿಗೆ ಪತ್ರ

ಕಷ್ಟಕರ ಕಾರ್ಯಾಚರಣೆಯಿಂದ ಹೋರಿಯನ್ನು ಹರಸಹಾಸ ಪಟ್ಟು ರಕ್ಷಿಸಿ ಬಸಪ್ಪ ಅವರಿಗೆ ಒಪ್ಪಿಸುತ್ತಿದ್ದಂತೆ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ. ಇದನ್ನೂ ಓದಿ:  ಸಿಡಿ ಕೇಸ್ ಕ್ಲಿಯರ್ ಆಗುತ್ತೆ – ರಮೇಶ್ ಪರ ಸಹೋದರ ಬಾಲಚಂದ್ರ ಜಾರಕಿಹೊಳಿ ಬ್ಯಾಟಿಂಗ್

Comments

Leave a Reply

Your email address will not be published. Required fields are marked *