ಹೊತ್ತಿ ಉರಿದ ಬಸ್- 12 ಮಂದಿ ಸಜೀವ ದಹನ

ಜೈಪುರ್: ಖಾಸಗಿ ಬಸ್ ಮತ್ತು ಟ್ಯಾಂಕರ್ ಡಿಕ್ಕಿಯಾದ ಪರಿಣಾಮ ಬಸ್‍ಗೆ ಬೆಂಕಿ ಹೊತ್ತಿಕೊಂಡು ಸುಮಾರು 12 ಮಂದಿ ಸಜೀವ ದಹನವಾಗಿರುವ ಘಟನೆ ರಾಜಸ್ಥಾನದ ಬಾರ್ಮರ್ ಜೋಧ್‍ಪುರ ಹೆದ್ದಾರಿಯಲ್ಲಿ ನಡೆದಿದೆ.

ಈ ಬಸ್ ಬಲೋತ್ರಾದಿಂದ ಬೆಳಗ್ಗೆ 9.55 ಸುಮಾರಿಗೆ ಹೊರಟಿತ್ತು. ಟ್ಯಾಂಕರ್ ಎದುರಿನಿಂದ ಬಂದು ಡಿಕ್ಕಿಹೊಡೆದಿದೆ. ಟ್ಯಾಂಕರ್ ಚಾಲಕ ರಸ್ತೆಯ ತಪ್ಪಾದ ಬದಿಯಲ್ಲಿ ವಾಹನ ಚಲಾಯಿಸಿಕೊಂಡು ಬಂದಿದ್ದೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಟ್ಯಾಂಕರ್ ಡಿಕ್ಕಿಯಾಗುತ್ತಿದ್ದಂತೆ ಒಮ್ಮೆಲೇ ಬಸ್‍ಗೆ ಬೆಂಕಿ ತಗುಲಿದೆ. ಈ ಹೆದ್ದಾರಿಯಲ್ಲಿ ಸಿಕ್ಕಾಪಟೆ ಟ್ರಾಫಿಕ್ ಜಾಮ್ ಆಗಿದೆ. ಇದನ್ನೂ ಓದಿ: ನ.11 ಕ್ಕೆ ರಾಜ್ಯಾದ್ಯಂತ ಒನಕೆ ಓಬವ್ವ ಜಯಂತಿ ಆಚರಣೆಗೆ ಸರ್ಕಾರ ಆದೇಶ

ಸ್ಥಳದಲ್ಲಿ ಅನೇಕ ಪೊಲೀಸ್ ಸಿಬ್ಬಂದಿಯಿದ್ದು, ರಕ್ಷಣಾ ಕಾರ್ಯಾಚರಣೆಯೂ ನಡೆಯುತ್ತಿದೆ. ಪಚ್ಪದ್ರ ಶಾಸಕ ಮದನ್ ಪ್ರಜಾಪತ್, ಉಸ್ತುವಾರಿ ಸಚಿವ ಸುಖರಾಮ್ ವಿಷ್ಣೋಯ್ ಇನ್ನಿತರ ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಹಾಟ್ ಬೆಡಗಿ ಪೂನಂ ಪಾಂಡೆ ಆಸ್ಪತ್ರೆಗೆ ದಾಖಲು

ಬಾರ್ಮರ್ ಜಿಲ್ಲಾಧಿಕಾರಿಯೊಟ್ಟಿಗೆ ಮಾತನಾಡಿದ್ದೇನೆ. ರಕ್ಷಣಾ ಕಾರ್ಯಾಚರಣೆ ಕುರಿತಾಗಿ ಅವರಿಗೆ ನಿರ್ದೇಶನ ನೀಡಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಎಲ್ಲ ವ್ಯವಸ್ಥೆ ಮಾಡಲಾಗುವುದು. ಅಪಘಾತದಲ್ಲಿ 12 ಮಂದಿ ಮೃತಪವರಿಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.

Comments

Leave a Reply

Your email address will not be published. Required fields are marked *