ಕ್ಯಾಂಟರ್‌ಗೆ ಕಾರು ಡಿಕ್ಕಿ; ನಾಲ್ವರು ಸ್ಥಳದಲ್ಲೇ ಸಾವು

ಬಾಗಲಕೋಟೆ: ಕ್ಯಾಂಟರ್  ಹಾಗೂ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ (Bagalkote) ಜಿಲ್ಲೆ ಹುನಗುಂದ ತಾಲ್ಲೂಕಿನ ಧನ್ನೂರು ಎಂಬಲ್ಲಿ ನಡೆದಿದೆ.

ಲಕ್ಷ್ಮಣ ವಡ್ಡರ್ (55),ಬೈಲಪ್ಪ ಬಿರಾದಾರ್(45), ರಾಮಣ್ಣ ನಾಯಕಮಕ್ಕಳು (50) ಹಾಗೂ ಕಾರು ಚಾಲಕ ರಫಿಕ್ ಮುಲ್ಲಾ(25) ಸಾವಿಗೀಡಾದವರು. ಮೃತರು ವಿಜಯಪುರ (Vijayapura) ಜಿಲ್ಲೆ ಬಿದರಕುಂದಿ ಗ್ರಾಮದವರು. ತಡರಾತ್ರಿ 2 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಇದನ್ನೂ ಓದಿ: ಮುಡಾ ಹಗರಣ ಸಂಕಷ್ಟ; ಹೈಕಮಾಂಡ್‌ಗೆ ವರದಿ ನೀಡಿದ ಸಿಎಂ ಸಿದ್ದರಾಮಯ್ಯ

ಕಾರು ಮುದ್ದೇಬಿಹಾಳ (Muddebihal) ಕಡೆ ಹೊರಟಿತ್ತು. ಕ್ಯಾಂಟರ್ ಮುದ್ದೇಬಿಹಾಳದಿಂದ ಹುನಗುಂದ ಕಡೆ ಬರುತ್ತಿತ್ತು. ಈ ವೇಳೆ ಕಾರು ಚಾಲಕ ನಿದ್ರೆಗೆ ಜಾರಿದ್ದು, ಕ್ಯಾಂಟರ್‌ಗೆ ಡಿಕ್ಕಿ ಹೊಡೆದಿದ್ದಾನೆ. ಕಾರು ನಜ್ಜುಗುಜ್ಜಾಗಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: Karawar | ಹಣಕೋಣ ಉದ್ಯಮಿ ಹತ್ಯೆ -ಪ್ರಮುಖ ಆರೋಪಿ ಆತ್ಮಹತ್ಯೆ, ಮೂವರ ಬಂಧನ

ಘಟನೆ ನಡೆದ ಸ್ಥಳಕ್ಕೆ ಹುನಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ತಿರುಪತಿ ಲಡ್ಡು ವಿವಾದದ ಬಳಿಕ ಹೆಚ್ಚಿದ ಬೇಡಿಕೆ – ಹಾಸನಾಂಬ ಲಡ್ಡು ಪ್ರಸಾದಕ್ಕೂ ನಂದಿನಿ ತುಪ್ಪ