ಬೆಂಗಳೂರು: ಶುಕ್ರವಾರ ನೈಸ್ ರಸ್ತೆಯ ಹೆಮ್ಮಿಗೆಪುರ ಸೇತುವೆ ಬಳಿ ಸ್ವಿಫ್ಟ್ ಕಾರೊಂದು ಲಾರಿ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಭಾರತ್ (28) ಮೃತನಾದ ದುರ್ದೈವಿ. ಗುರುವಾರ ತಡರಾತ್ರಿ ಭರತ್ ತನ್ನ ಸ್ನೇಹಿತ ಜಯಂತ್ ಹಾಗೂ ಉದಯ್ ರೊಂದಿಗೆ ಸ್ವಿಫ್ಟ್ ಕಾರಿನಲ್ಲಿ ನೈಸ್ ರಸ್ತೆಯಲ್ಲಿ ತೆರಳುತ್ತಿದ್ದರು. ಈ ವೇಳೆ ಹೆಮ್ಮಿಗೆಪುರ ಸೇತುವೆ ಸಮೀಪ ಹಿಂಬದಿಯಿಂದ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ಭರತ್ ಸ್ಥಳದಲ್ಲೇ ಮೃತಪಟ್ಟರೆ, ಕಾರಿನಲ್ಲಿದ್ದ ಜಯಂತ್ ಹಾಗೂ ಉದಯ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ನೈಸ್ ಸಿಬ್ಬಂದಿ ನಜ್ಜುಗುಜ್ಜಾಗಿದ್ದ ಕಾರಿನಲ್ಲಿ ಸಿಲುಕಿದ್ದ ಇಬ್ಬರನ್ನೂ ರಕ್ಷಣೆ ಮಾಡಿ, ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಸಂಬಂಧ ಕೆಂಗೇರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Leave a Reply