ತಿರುವನಂತಪುರಂ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಒಳ್ಳೆಯವರಲ್ಲ. RSS ಭಯೋತ್ಪಾದಕ ಸಂಘಟನೆಯಾಗಿದೆ ಎಂದು ಬರೆದಿದ್ದ ಕಾರನ್ನು ಪೊಲೀಸರು ತಿರುವನಂತಪುರಂನಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.
ನಡೆದಿದ್ದೇನು?: ಹೋಟೆಲ್ ಒಂದಕ್ಕೆ ವ್ಯಕ್ತಿಯೊಬ್ಬ ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಅನುಮಾನಾಸ್ಪದವಾಗಿ ವರ್ತಿಸಿದ್ದಾನೆ. ಬಳಿಕ ಹೋಟೆಲ್ ಒಳಗೆ ಬಂದು ಮದ್ಯ ಕೇಳಿ ಸಿಬ್ಬಂದಿ ಜೊತೆ ಜಗಳವಾಡಿಕೊಂಡಿದ್ದಾನೆ. ಹೋಟೆಲ್ ಸಿಬ್ಬಂದಿ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಅಷ್ಟರಲ್ಲಿ ಆ ವ್ಯಕ್ತಿ ಕಾರನ್ನು ಅಲ್ಲಿಯೇ ಬಿಟ್ಟು ಆಟೋ ಹತ್ತಿ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಪಂಜಾಬ್ ಚುನಾವಣೆ – ನಟ ಸೋನು ಸೂದ್ ಸಹೋದರಿ ಕಾಂಗ್ರೆಸ್ ಸೇರ್ಪಡೆ

ಸ್ಥಳಕ್ಕೆ ಬಂದ ಪೊಲೀಸರು ಕಾರು ತಪಾಸಣೆ ನಡೆಸಿದಾಗ ಅದರಲ್ಲಿ ಹಳೆಯ ಬಟ್ಟೆಗಳು, ಕೇಬಲ್‍ಗಳು, ಎಲೆಕ್ಟ್ರಾನಿಕ್ ವಸ್ತುಗಳು ದೊರೆತಿವೆ. ಆದರೆ ಕಾರ್ ಮೇಲೆ ವಿಚಿತ್ರವಾಗಿ ಬರೆಯಲಾಗಿತ್ತು. ಅನುಮಾನಗೊಂಡ ಪೊಲೀಸರು ಬಾಂಬ್ ಪತ್ತೆ ದಳ, ಶ್ವಾನ ದಳವನ್ನು ಕರೆಯಿಸಿ ತಪಾಸಣೆ ನಡೆಸಿದ್ದಾರೆ. ಬಳಿಕ ಕಾರನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ – ಫೆ.10ರಿಂದ ಮತದಾನ, ಮಾ.10ರಂದು ಮತ ಎಣಿಕೆ
ಕಾರ್ ಮೇಲೆ ಪ್ರಧಾನಿ ನರೇಂದ್ರ ರೈತರ ಹೋರಾಟದ ವೇಳೆ 750 ಜನರನ್ನು ಕೊಂದಿದ್ದಾನೆ. ಪ್ರಧಾನಿ ಒಳ್ಳೆಯವರಲ್ಲ. ಆರ್‌ಎಸ್‌ಎಸ್ ಒಂದು ಭಯೋತ್ಪಾದಕ ಸಂಘಟನೆಯಾಗಿದೆ. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಲಖೀಂಪುರದಲ್ಲಿ ನಾಲ್ವರನ್ನು ಹತ್ಯೆ ಮಾಡಿದ್ದಾರೆ ಎಂದು ಕಾರ್ ಮೇಲೆ ಬರೆಯಲಾಗಿತ್ತು.

Leave a Reply