Haveri | ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ – 6 ಮಂದಿ ದುರ್ಮರಣ

ಹಾವೇರಿ: ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸಾವನ್ನಪ್ಪಿದ ಘಟನೆ ಹಾವೇರಿ (Haveri) ಜಿಲ್ಲೆ ಬ್ಯಾಡಗಿ (Byadagi) ತಾಲೂಕಿನ ಮೋಟೆಬೆನ್ನೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 48 ಬಳಿ ನಡೆದಿದೆ.

ಸ್ಥಳಕ್ಕೆ ಬ್ಯಾಡಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಆಪರೇಷನ್ ಸಿಂಧೂರ – ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ್‌ಮೈಂಡ್ ಸಾವು

ಘಟನೆ ಕುರಿತು ಹಾವೇರಿ ಎಸ್‌ಪಿ ಅಂಶುಕುಮಾರ್ ಪ್ರತಿಕ್ರಿಯಿಸಿದ್ದು, ಎನ್‌ಹೆಚ್ 4 ಹೆದ್ದಾರಿಯಲ್ಲಿ ಅಪಘಾತ ಆಗಿದೆ. ಲಾರಿಗೆ ಹಿಂಬದಿಯಿಂದ ಹೋಗಿ ಕಾರು ಗುದ್ದಿದೆ. ಸ್ಥಳದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಬಳಿಕ ಆಸ್ಪತ್ರೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಹಾವೇರಿ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಮೃತದೇಹಗಳನ್ನು ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಶವಗಳನ್ನು ಸಂಬಂಧಿಕರಿಗೆ ಹಸ್ತಾಂತರ ಮಾಡಲಾಗುತ್ತದೆ. ಮೃತಪಟ್ಟ 6 ಜನ ರಾಣೆಬೆನ್ನೂರು ನಗರದ ಅಶೋಕ್ ನಗರದ ನಿವಾಸಿಗಳು ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಬಿಬಿಎಂಪಿ ಕಾರ್ಮಿಕರಿಗೆ ಬಿಎಂಟಿಸಿ ಬಸ್ ಡಿಕ್ಕಿ – ಇಬ್ಬರಿಗೆ ಗಂಭೀರ ಗಾಯ