ಕಾರು, ಟ್ರಕ್ ನಡುವೆ ಅಪಘಾತ – ಮದುವೆಗೆ ಹೊರಟಿದ್ದ ಎಂಟು ಮಂದಿ ಸಜೀವ ದಹನ

ಲಕ್ನೊ: ಕಾರೊಂದು (Car) ಟ್ರಕ್‍ಗೆ (Truck) ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮಗು ಸೇರಿದಂತೆ ಎಂಟು ಮಂದಿ ಸಜೀವ ದಹನಗೊಂಡ ಘಟನೆ ಉತ್ತರ ಪ್ರದೇಶದ ಬರೇಲಿಯ ನೈನಿತಾಲ್ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರು ಸಂಬಂಧಿಕರ ಮದುವೆಗೆ ಹೊರಟಿದ್ದರು ಎಂದು ತಿಳಿದು ಬಂದಿದೆ.

ಅಪಘಾತದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಟ್ರಕ್‍ಗೆ ಕಾರು ಡಿಕ್ಕಿಯಾದ ಬಳಿಕ ಬೆಂಕಿ ಹೊತ್ತಿಕೊಂಡಿದೆ. ಇದರ ಪರಿಣಾಮ ಏಳು ವಯಸ್ಕರು ಹಾಗೂ ಮಗು ಸಾವನ್ನಪ್ಪಿದೆ. ಡಿಕ್ಕಿಯಾದ ರಭಸಕ್ಕೆ ಕಾರಿನ ಡೋರ್‍ಗಳು ಜಾಮ್ ಆಗಿದ್ದರಿಂದ ಒಳಗಿದ್ದವರಿಗೆ ಪಾರಾಗಲು ಸಾಧ್ಯವಾಗಿಲ್ಲ ಎಂಬ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಕರ್ಣಿ ಸೇನಾ ಮುಖ್ಯಸ್ಥನ ಹತ್ಯೆ ಪ್ರಕರಣ – ಇಬ್ಬರು ಶೂಟರ್ ಸೇರಿ ಮೂವರು ಅರೆಸ್ಟ್

ಭೋಜಿಪುರದ ಬಳಿ ಹೆದ್ದಾರಿಯಲ್ಲಿ ವೇಗವಾಗಿ ಬಂದ ಕಾರು, ಟ್ರಕ್‍ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೆಂಕಿ ಹೊತ್ತಿಕೊಂಡು ಒಳಗಿದ್ದವರು ಸಾವನ್ನಪ್ಪಿದ್ದಾರೆ. ಕಾರು ಸೆಂಟ್ರಲ್ ಲಾಕ್ ಆದ ಪರಿಣಾಮ ಅವರಿಗೆ ಬೆಂಕಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮಗಳನ್ನು ಕೊಂದು ರೆಸಾರ್ಟ್‌ನಲ್ಲಿ ತಂದೆ-ತಾಯಿ ನೇಣಿಗೆ ಶರಣು