ಪೊಲೀಸ್‌ ಅಧಿಕಾರಿ ಜೊತೆ ನಟಿ ಡಿಂಪಲ್‌ ಹಯಾತಿ ಕಿರಿಕ್-‌ ನಟಿಯ ವಿರುದ್ಧ ಬಿತ್ತು ಕೇಸ್

ಸೌತ್ ನಟಿ ಡಿಂಪಲ್ ಹಯಾತಿ (Dimple Hayati) ಅವರು ಸಿನಿಮಾಗಳಿಗಿಂತ ಕಿರಿಕ್ ಸುದ್ದಿಗಳಿಂದಲೇ ಹೆಚ್ಚೆಚ್ಚು ಸುದ್ದಿ ಮಾಡ್ತಿದ್ದಾರೆ. ಇದೀಗ ಐಪಿಎಸ್ ಅಧಿಕಾರಿ ಜೊತೆ ಡಿಂಪಲ್ ಹಯಾತಿ ಕಿರಿಕ್ ಮ್ಯಾಟರ್ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಇದನ್ನೂ ಓದಿ:ಕೆಂಪು ಬಣ್ಣದ ಕೋಟು-ಪ್ಯಾಂಟು; ರಶ್ಮಿಕಾ ಸಖತ್ ಹಾಟು

ಪೊಲೀಸ್ ಅಧಿಕಾರಿ ರಾಹುಲ್ ಹೆಗ್ಡೆ(Rahul Hegde)- ಸೌತ್ ನಟಿ ಡಿಂಪಲ್ ಹಯಾತಿ ನಡುವಿನ ಜಗಳ ತಾರಕಕ್ಕೇರಿದೆ. ಪಾರ್ಕಿಂಗ್ ವಿಚಾರಕ್ಕೆ ಶುರುವಾದ ಕಿತ್ತಾಟ ಈಗ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಪೊಲೀಸ್ ಅಧಿಕಾರಿಯ ಕಾರನ್ನು ಡ್ಯಾಮೇಜ್ ಮಾಡಿದ ಆರೋಪದ ಮೇಲೆ ನಟಿ ಡಿಂಪಲ್ ಹಯಾತಿ ವಿರುದ್ಧ ಪೊಲೀಸರು ಕೇಸ್ ದಾಖಲಿಸಲಾಗಿದೆ.

ನಟಿ ಡಿಂಪಲ್ ಹಾಗೂ ಅವರ ಗೆಳೆಯ ವಿಕ್ಟರ್ ಹೈದರಾಬಾದ್‌ನ ಅಪಾರ್ಟ್ಮೆಂಟ್ ಒಂದರಲ್ಲಿ ವಾಸವಾಗಿದ್ದಾರೆ. ಇದೇ ಅಪಾರ್ಟ್ಮೆಂಟ್‌ನಲ್ಲಿ ಹೈದರಾಬಾದ್‌ನ ಟ್ರಾಫಿಕ್ ಪೊಲೀಸ್ ಡೆಪ್ಯೂಟಿ ಕಮೀಷನರ್, ಐಪಿಎಸ್ ಅಧಿಕಾರಿ ರಾಹುಲ್ ಹೆಗ್ಡೆ ಕೂಡ ವಾಸವಾಗಿದ್ದಾರೆ. ಇವರ ಮಧ್ಯೆ ಕೆಲ ಸಮಯದಿಂದ ಪಾರ್ಕಿಂಗ್ ವಿಚಾರದಲ್ಲಿ ಕಿತ್ತಾಟ ನಡೆದಿದೆ. ನಟಿ ಈ ವಿಚಾರದಲ್ಲಿ ರಿವೇಂಜ್ ತೆಗೆದುಕೊಂಡಿದ್ದಾರೆ.

ಮೇ ೧೪ರಂದು ಡಿಂಪಲ್ ಹಯಾತಿ ಅವರು ರಾಹುಲ್ ಕಾರಿಗೆ ಡ್ಯಾಮೇಜ್ ಮಾಡಿದ್ದಾರೆ. ಇದು ಉದ್ದೇಶಪೂರ್ವಕವಾಗಿತ್ತು ಎಂಬುದಕ್ಕೆ ಸಿಸಿಟಿವಿ ದೃಶ್ಯಗಳು ಸಾಕ್ಷ್ಯ ಸಿಕ್ಕಿದೆ. ಇದನ್ನು ಆಧರಿಸಿ ನಟಿ ಡಿಂಪಲ್ ವಿರುದ್ಧ ರಾಹುಲ್ ಅವರ ಕಾರು ಡ್ರೈವರ್ ದೂರು ದಾಖಲಿಸಿದ್ದರು. ಸದ್ಯ ಪೊಲೀಸರು ಕೇಸ್ ದಾಖಲು ಮಾಡಿಕೊಂಡಿದ್ದಾರೆ. ಡಿಂಪಲ್ ಹಯಾತಿಗೆ ಸಮನ್ಸ್ ನೀಡಲಾಗಿದೆ. ಸೋಮವಾರ (ಮೇ 29) ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಇಬ್ಬರ ಜಗಳ ಯಾವ ಹಂತಕ್ಕೆ ತಲುಪಲಿದೆ. ಹೇಗೆ ತಿರುವು ಪಡೆಯಲಿದೆ ಎಂಬುದನ್ನ ಕಾದುನೋಡಬೇಕಿದೆ.