ಬೆಂಗಳೂರಿನಲ್ಲಿ ಅ.3ರಿಂದ ಜಾತಿಗಣತಿ ಸಮೀಕ್ಷೆ ಆರಂಭ – ಜಿಬಿಎ ಮುಖ್ಯ ಆಯುಕ್ತ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಅ.3ರಿಂದ ಜಾತಿಗಣತಿ ಸಮೀಕ್ಷೆ (Caste Census Survey) ಆರಂಭವಾಗಲಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ (Greater Bengaluru Authority) ಮುಖ್ಯ ಆಯುಕ್ತ ಮಹೇಶ್ವರ ರಾವ್ (Maheshwar Rao) ಅವರು ತಿಳಿಸಿದ್ದಾರೆ.

ಈ ಕುರಿತು `ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಅಕ್ಟೋಬರ್ 3ರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ. ಸದ್ಯ ಸಮೀಕ್ಷಾ ಸಿಬ್ಬಂದಿಗೆ ತರಬೇತಿ ನೀಡಲಾಗುತ್ತಿದ್ದು, ಅ.3ರ ಒಳಗೆ ತರಬೇತಿ ಮುಕ್ತಾಯ ಆಗಲಿದೆ. ಅದಾದ ಬಳಿಕ ಸಮೀಕ್ಷೆ ಆರಂಭ ಆಗಲಿದೆ ಎಂದು ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ: ರಾಯಚೂರು | ಜಾತಿಗಣತಿ ಸಮೀಕ್ಷೆಗೆ ನಿರ್ಲಕ್ಷ್ಯ – ಆರು ಅಂಗನವಾಡಿ ಕಾರ್ಯಕರ್ತೆಯರು ವಜಾ, 57 ಸಿಬ್ಬಂದಿಗೆ ನೋಟಿಸ್

ಈ ಮೊದಲು ಸಿಬ್ಬಂದಿ ಇಲ್ಲದ ಕಾರಣದಿಂದ ಬೆಂಗಳೂರಿನಲ್ಲಿ ಒಂದು ವಾರ ತಡವಾಗಿ ಜಾತಿಗಣತಿ ಸಮೀಕ್ಷೆ ಆರಂಭಿಸುವುದಾಗಿ ತಿಳಿಸಿದ್ದರು. ಅದರಂತೆ ಇದೀಗ ದಿನಾಂಕ ನಿಗದಿಪಡಿಸಿದ್ದಾರೆ. ಈಗಾಗಲೇ ಬೆಂಗಳೂರು ಹೊರತುಪಡಿಸಿ ರಾಜ್ಯದೆಲ್ಲೆಡೆ ಸೆ.22ರಿಂದ ಜಾತಿಗಣತಿ ಸಮೀಕ್ಷೆ ಆರಂಭವಾಗಿದ್ದು, ಅ.7ರಂದು ಕೊನೆಗೊಳ್ಳಲಿದೆ.