ಗೋಹತ್ಯೆ ನಿಷೇಧ ಕಾಯ್ದೆ ವಿಫಲವಾಗಲು ಬಿಡಬೇಡಿ- ಪೊಲೀಸರಿಗೆ ಆರಗ ಜ್ಞಾನೇಂದ್ರ ಸೂಚನೆ

ಉಡುಪಿ: ರಾಜ್ಯದಲ್ಲಿ ಗೋಹತ್ಯಾ ನಿಷೇಧ ಕಾಯ್ದೆ ವಿಫಲವಾಗಲು ಪೊಲೀಸರು ಬಿಡಬಾರದು, ಈಗಿರುವ ಕಾನೂನು ಕಠಿಣವಾಗಿದೆ. ಅದನ್ನು ಕಟ್ಟುನಿಟ್ಟಾಗಿ ಜಾರಿಗೆ ತನ್ನಿ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.

ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕರಾವಳಿಯಲ್ಲಿ ಹೆಚ್ಚುತ್ತಿರುವ ಕಳ್ಳತನ ಪ್ರಕರಣಗಳ ಕುರಿತು ಕಳವಳ ವ್ಯಕ್ತಪಡಿಸಿದರು. ಗೋಹತ್ಯಾ ನಿಷೇಧ ಕಾಯ್ದೆ ಜಾರಿಯಲ್ಲಿ ಇದೆ. ಈ ಕಾಯ್ದೆ ವಿಫಲ ಆಗಿಲ್ಲ, ವಿಫಲ ಆಗಲೂ ಬಾರದು. ಗೋಹತ್ಯೆ ಹೆಚ್ಚುತ್ತಿರುವುದರಿಂದ ಸಾಮಾಜಿಕ ಅಶಾಂತಿಗೂ ಕಾರಣವಾಗಿದೆ. ಅಕ್ರಮ ಗೋ ಸಾಗಾಟ, ಗೋಹತ್ಯೆ ಶೇಕಡ 100ರಷ್ಟು ನಿಲ್ಲಿಸಬೇಕು. ಈ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡುತ್ತೇನೆ. ಗೋವು ಕಳ್ಳರಿಗೆ ಸೂಕ್ತ ಶಿಕ್ಷೆ ಆಗಲಿದೆ ಎಂದರು. ಇದನ್ನೂ ಓದಿ: ಸಿದ್ದರಾಮಯ್ಯ, ಕುಮಾರಸ್ವಾಮಿ ವೋಟಿಗಾಗಿ ಜೊಲ್ಲು ಸುರಿಸ್ತಿದ್ದಾರೆ: ಆರಗ ಜ್ಞಾನೇಂದ್ರ

ಕಾಡಿನಿಂದ ಸ್ಯಾಟಲೈಟ್ ಕರೆ- ಶೀಘ್ರ ಪತ್ತೆ:
ಕರಾವಳಿ ಮತ್ತು ಮಲೆನಾಡಿನ ಕಾಡುಗಳಿಂದ ಸ್ಯಾಟಲೈಟ್ ಕರೆಗಳು ಹೋಗುತ್ತಿರುವ ಬಗ್ಗೆ ಮಾತನಾಡಿದ ಸಚಿವರು, ಅಜ್ಞಾತ ಸ್ಥಳಗಳಿಂದ ಸ್ಯಾಟಲೈಟ್ ಕರೆ ಹೋಗಿರುವ ಬಗ್ಗೆ ವರದಿಯಾಗಿದ್ದು, ಕರಾವಳಿ ಮಲೆನಾಡು ಕಾಡಿನಿಂದ ಎಷ್ಟು ಕರೆಗಳು ಹೋಗಿದೆ ಎಂಬ ಬಗ್ಗೆ ನನಗೆ ಮಾಹಿತಿಯಿಲ್ಲ. ಕೇಂದ್ರ ಸರ್ಕಾರದ ತಂಡ ನಮ್ಮ ಪೊಲೀಸ ಜೊತೆ ಸಂಪರ್ಕದಲ್ಲಿದೆ. ಇದು ರಾಷ್ಟ್ರೀಯ ಭದ್ರತೆಯ ಪ್ರಶ್ನೆ ಹಾಗಾಗಿ ಈ ಬಗ್ಗೆ ಹೆಚ್ಚೇನೂ ಮಾತನಾಡಲು ಸಾಧ್ಯವಿಲ್ಲ. ಯಾವುದೇ ಅರಣ್ಯ ಪ್ರದೇಶದಿಂದ ಕರೆ ಹೋಗಿರಲಿ. ಕರೆ ಮಾಡಿದವರನ್ನು ಪತ್ತೆಮಾಡಿ ಸೂಕ್ತಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ: ಚಲಿಸುವ ರೈಲಿನಲ್ಲಿ ಸಾಮೂಹಿಕ ಅತ್ಯಾಚಾರ- ನಾಲ್ವರ ಬಂಧನ

Comments

Leave a Reply

Your email address will not be published. Required fields are marked *