ಚೈತ್ರಾ ಕುಂದಾಪುರ ವಂಚನೆ ಬಯಲಾಗ್ತಿದ್ದಂತೆ ಬಿಜೆಪಿ ಟೀಕಿಸಿದ ಕಾಂಗ್ರೆಸ್

ಬೆಂಗಳೂರು: ಚೈತ್ರಾ ಕುಂದಾಪುರ (Chaitra Kundapura) ವಂಚನೆ ಪುರಾಣ ಬಯಲಾದ ಬೆನ್ನಲ್ಲೇ ಬಿಜೆಪಿಯನ್ನು (BJP) ಟೀಕಿಸಿ ಕಾಂಗ್ರೆಸ್ (Congress) ಟ್ವೀಟ್ ಮಾಡಿದೆ. ಬಿಜೆಪಿಯಲ್ಲಿ ಸಿಎಂ ಹುದ್ದೆ ಮಂತ್ರಿಗಿರಿ ಮಾರಾಟವಾದಂತೆ ಟಿಕೆಟ್‍ಗಳು ಮಾರಾಟವಾಗಿದೆಯಾ ಅಂತಾ ಕೆಣಕಿದೆ.

ಉಗ್ರ ಭಾಷಣಕಾರ್ತಿ ಬಿಜೆಪಿಯ ಎಂಎಲ್‍ಎ ಟಿಕೇಟ್ ಕೊಡಿಸೋದಾಗಿ 7 ಕೋಟಿ ಪಡೆದು ವಂಚಿಸಿದ್ದಾರೆ ಅಂತಾ ಕುಂದಾಪುರದ ಉದ್ಯಮಿಯೊಬ್ಬರು ದೂರಿ, ಈ ವಂಚನೆ ಪ್ರಕರಣ ಬೆಳಕಿಗೆ ಬಂದ್ರೂ ಬಿಜೆಪಿ ಪಕ್ಷ ದೂರು ಕೊಡದೇ ಸುಮ್ಮನಿರೋದ್ಯಾಕೆ..? ಈ 7 ಕೋಟಿ ವಂಚನೆಯಲ್ಲಿ ಬಿಜೆಪಿಗರ ಪಾಲೆಷ್ಟು? ಆರ್‍ಎಸ್‍ಎಸ್ ಪಾಲೆಷ್ಟು ಎಂದು ಪ್ರಶ್ನಿಸಿದೆ. ಇದನ್ನೂ ಓದಿ: ಯಾವುದೋ ಫೋನ್ ಬಂತೆಂದು ಕಾರ್ಯಕ್ರಮ ರದ್ದು ಮಾಡಿದ್ದ ಚೈತ್ರಾ ಕುಂದಾಪುರ!

ಈ ಮಧ್ಯೆ ಬಿಜೆಪಿ ನಾಯಕರೊಂದಿಗೆ ಚೈತ್ರಾ ಕುಂದಾಪುರ ಇರೋ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಚೈತ್ರಾ ತಪ್ಪು ಮಾಡಿದ್ರೆ ಕಾನೂನು ಕ್ರಮ ಕೈಗೊಳ್ಳಲಿ. ಅನಗತ್ಯವಾಗಿ ಹಿಂದುಪರ ಕಾರ್ಯಕರ್ತರಿಗೆ ತೊಂದರೆ ಕೊಡುವುದು ಸರಿಯಲ್ಲ ಎಂದು ಮಾಜಿ ಮಂತ್ರಿ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಇದಕ್ಕೆ ಕಾಂಗ್ರೆಸ್ ಆಕ್ರೋಶ ಹೊರಹಾಕಿದೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]