ಟಕ್ಕರ್ ಟೀಸರ್ ಮೆಚ್ಚಿದ ದರ್ಶನ್

ಬೆಂಗಳೂರು: ಎಸ್.ಎಲ್.ಎನ್. ಕ್ರಿಯೇಶನ್ಸ್ ಲಾಂಛನದಲ್ಲಿ ನಾಗೇಶ್ ಕೋಗಿಲು ನಿರ್ಮಿಸುತ್ತಿರುವ ಎರಡನೇ ಸಿನಿಮಾ ಟಕ್ಕರ್. ದರ್ಶನ್ ಅವರ ಕುಟುಂಬದ ಹುಡುಗ ಮನೋಜ್ ಈ ಸಿನಿಮಾದ ಮೂಲಕ ನಾಯಕ ನಟನಾಗಿ ಪಾದಾರ್ಪಣೆ ಮಾಡುತ್ತಿರುವ ವಿಚಾರ ಈಗಾಗಲೇ ಜಾಹೀರಾಗಿದೆ. ಇತ್ತೀಚಿಗಷ್ಟೇ ಟಕ್ಕರ್ ಚಿತ್ರದ ಮೊದಲ ಟೀಸರನ್ನು ದಿನಕರ್ ತೂಗುದೀಪ ಲೋಕಾರ್ಪಣೆಗೊಳಿಸಿದ್ದರು. ಈಗ ದರ್ಶನ್ ಅವರು ಟಕ್ಕರ್ ಚಿತ್ರತಂಡವನ್ನು ಮನೆಗೆ ಕರೆಸಿಕೊಂಡು ಟೀಸರ್ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಅಲ್ಲದೇ ಈ ಚಿತ್ರವನ್ನು ಯಾವ ರೀತಿ ಬಿಡುಗಡೆ ಮಾಡಬೇಕು ಎಂಬಿತ್ಯಾದಿ ವಿಚಾರಗಳ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದ್ದಾಗಿ ನಿರ್ಮಾಪಕ ನಾಗೇಶ್ ಕೋಗಿಲು ತಿಳಿಸಿದ್ದಾರೆ. ಇದನ್ನೂ ಓದಿ: ಟಕ್ಕರ್ ಟೀಸರ್ ರಿಲೀಸ್ ಮಾಡಿದ ದಿನಕರ್ ತೂಗುದೀಪ

ಮೊದಲ ಟೀಸರ್ ತುಂಬಾ ಚೆನ್ನಾಗಿ ಬಂದಿದೆ ಎಂದಿದ್ದು ಮಾತ್ರವಲ್ಲದೆ, ಧ್ವನಿ ಮುದ್ರಣಗೊಂಡಿರುವ ಟೈಟಲ್ ಸಾಂಗ್ ಅನ್ನು ಕೇಳಿ ಅದರ ಬಗ್ಗೆ ಕೂಡಾ ದರ್ಶನ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾಗಿ ಚಿತ್ರದ ನಿರ್ದೇಶಕ ವಿ ರಘು ಶಾಸ್ತ್ರಿ ತಿಳಿಸಿದ್ದಾರೆ. ಇದನ್ನೂ ಓದಿ: EXCLUSIVE: ದರ್ಶನ್ ಸೋದರಳಿಯ ‘ಟಕ್ಕರ್’ ಮನೋಜ್ ಫೈಟ್ ನೋಡಿ!

ಇದೇ ಸಂದರ್ಭದಲ್ಲಿ ಟಕ್ಕರ್ ಚಿತ್ರದ ನಾಯಕನಟ ಮನೋಜ್ ಅವರಿಗೆ “ನಿನ್ನನ್ನು ನಂಬಿ ನಿರ್ಮಾಪಕರು ಹಣ ಹೂಡಿದ್ದಾರೆ. ಪ್ರತಿ ಹಂತದಲ್ಲೂ ಅವರ ಜೊತೆಗಿರಬೇಕು. ನಿರ್ಮಾಪಕರ ಹಿತ ಕಾಯಬೇಕಿರುವುದು ಪ್ರತಿಯೊಬ್ಬ ಕಲಾವಿದನ ಕರ್ತವ್ಯ. ನಾಗೇಶ್ ಕೋಗಿಲು ಮತ್ತು ನಿನ್ನ ಸ್ನೇಹ ಬಾಂಧವ್ಯ ಈ ಒಂದು ಸಿನಿಮಾಗೆ ಕೊನೆಯಾಗಬಾರದು. ಟಕ್ಕರ್ ಸಿನಿಮಾ ತೆರೆಗೆ ಬಂದ ಮೇಲೂ ಇನ್ನೂ ಸಾಕಷ್ಟು ಸಿನಿಮಾಗಳು ನೀವು ಒಟ್ಟಿಗೇ ಕೆಲಸ ಮಾಡುವಂತಾಗಲಿ” ಎಂದು ಹಾರೈಸಿದ್ದಾರೆ. ಇದನ್ನೂ ಓದಿ:  ‘ಟಕ್ಕರ್’ಗಾಗಿ ಬಂತು ಫ್ಯಾಂಟಮ್!

Comments

Leave a Reply

Your email address will not be published. Required fields are marked *