ಪತಿಯನ್ನು ಅನ್‌ಫಾಲೋ ಮಾಡಿ ಡಿಪಿ ತೆಗೆದಿದ್ದ ವಿಜಯಲಕ್ಷ್ಮಿ ಇಂದು ಇನ್‌ಸ್ಟಾದಿಂದ್ಲೇ ದೂರ!

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಪತ್ನಿ ವಿಜಯಲಕ್ಷ್ಮಿ (Vijayalakshmi) ಅವರು ತಮ್ಮ ಇನ್‌ಸ್ಟಾಗ್ರಾಂ (Instagram) ಖಾತೆಯನ್ನೇ ಡಿಲೀಟ್‌ ಮಾಡಿದ್ದಾರೆ.

ಕಿಡ್ನಾಪ್‌ ಹಾಗೂ ಮರ್ಡರ್‌ ಪ್ರಕರಣದಲ್ಲಿ ಬಂಧನವಾಗುತ್ತಿದ್ದಂತೆಯೇ ದರ್ಶನ್‌ (Darshan) ಅವರನ್ನು ಅನ್‌ಫಾಲೋ ಮಾಡಿ, ಡಿಪಿ ರಿಮೂವ್‌ ಮಾಡಿದ್ದರು. ಆದರೆ ಇಂದು ವಿಜಯಲಕ್ಷ್ಮಿ ಇನ್‌ ಸ್ಟಾಗ್ರಾಂ ಖಾತೆಯಿಂದಲೇ ಹೊರ ನಡೆದಿದ್ದಾರೆ. ಅಂದರೆ ಇನ್‌ಸ್ಟಾ ಖಾತೆಯನ್ನು ಅವರು Dactivate ಮಾಡಿದ್ದಾರೆ.

ಬಳಕೆದಾರರು ಇನ್‌ಸ್ಟಾದಲ್ಲಿ ಮೆಸೇಜ್ ಮಾಡಿ ನಿಂದನೆ ಮಾಡುತ್ತಾ ಇದ್ದಿದ್ದರಿಂದ ಬೇಸರಗೊಂಡು ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ವಿಜಯಲಕ್ಷ್ಮಿ ಅವರು Dactivate ಮಾಡಲು ನಿಖರ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಇದನ್ನೂ ಓದಿ: ಇತಿಹಾಸದಲ್ಲೇ ಮೊದಲು- ದರ್ಶನ್‌ ಇರುವ ಪೊಲೀಸ್‌ ಠಾಣೆಗೆ ಶಾಮಿಯಾನ!

ಏನಿದು ಪ್ರಕರಣ..?: ಗೆಳತಿ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್‌ ಮಾಡಿದನೆಂದು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕಿಡ್ನಾಪ್‌ ಮಾಡಿ ಡಿ ಬಾಸ್‌ ಗ್ಯಾಂಗ್‌ ಚಿತ್ರಹಿಂಸೆ ನೀಡಿ ಕೊಲೆ ಮಾಡಿತ್ತು. ಬಳಿಕ ಶವವನ್ನು ಸುಮನಹಳ್ಳಿ ಬಳಿ ಮೋರಿಗೆ ಎಸೆದಿದ್ದರು. ಇದಾದ ಬಳಿಕ ಇಬ್ಬರು ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಗೆ ತೆರಳಿ ಶರಣಾಗಿದ್ದರು. ಇವರನ್ನು ವಿಚಾರಣೆ ನಡೆಸಿದಾಗ ಕರಾಳ ಸತ್ಯ ಬಯಲಾಗಿದೆ.

ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಹಾಗೂ ಗೆಳತಿ ಪವಿತ್ರಾ ಗೌಡ ಹೆಸರು ಕೇಳಿ ಬಂತು. ಕೂಡಲೇ ದರ್ಶನ್‌ ಅವರನ್ನು ಮೈಸೂರಿನಲ್ಲಿಯೇ ಅರೆಸ್ಟ್‌ ಮಾಡಿ ಬೆಂಗಳೂರಿಗೆ ಕರೆತರಲಾಗಿತ್ತು. ಇತ ಪವಿತ್ರಾ ಗೌಡರನ್ನು ಕೂಡಲೇ ಬಂಧಿಸಲಾಗಿತ್ತು. ಸದ್ಯ ಪಕ್ರಕರಣ ಸಂಬಂಧ ಒಟ್ಟು 14 ಮಂದಿಯನ್ನು ಬಂಧಿಸಿದ್ದು, ಸ್ಥಳ ಮಹಜರು ಪ್ರಕ್ರಿಯೆ ನಡೆಸಲಾಗುತ್ತಿದೆ.