ಇಂದಿನಿಂದ ಗೋಲ್ಡನ್ ಸ್ಟಾರ್ `ಚಮಕ್’- ಒಂದೇ ದಿನ ರಾಜರಥ ಟ್ರೇಲರ್ ವೀಕ್ಷಿಸಿದ 3 ಲಕ್ಷ ಮಂದಿ

ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ `ಚಮಕ್’ ಸಿನಿಮಾ ಇಂದು ರಾಜ್ಯಾದ್ಯಂತ ರಿಲೀಸ್ ಆಗ್ತಿದೆ.

ಸಿಂಪಲ್ ಸುನಿ ನಿರ್ದೇಶನದಲ್ಲಿ ಮೂಡಿಬಂದಿರೋ ಸಿನಿಮಾದಲ್ಲಿ ಕಿರಿಕ್ ಪಾರ್ಟಿ ಚಿತ್ರದ ರಶ್ಮಿಕಾ ಮಂದಣ್ಣ ಗಣೇಶ್‍ಗೆ ಜೋಡಿಯಾಗಿ ನಟಿಸಿದ್ದಾರೆ. ಈಗಾಗಲೇ ರಿಲೀಸ್ ಆಗಿರುವ ಚಿತ್ರದ ಟ್ರೇಲರ್ ಮತ್ತು ಹಾಡುಗಳು ಮೆಚ್ಚುಗೆಗೆ ಪಾತ್ರವಾಗಿದೆ. ಇದೇ ಮೊದಲ ಬಾರಿ ಗಣೇಶ್ ಮತ್ತು ರಶ್ಮಿಕಾ ಮಂದಣ್ಣ ಜೋಡಿಯಾಗಿ ನಟಿಸಿದ್ದಾರೆ.

ಇನ್ನೂ ಗುರುವಾರ ರಾಜರಥ ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು, ಕೇವಲ ಒಂದೇ ದಿನದಲ್ಲಿ ಬರೋಬ್ಬರಿ 3 ಲಕ್ಷದ 80 ಸಾವಿರ ಮಂದಿ ವೀಕ್ಷಿಸಿದ್ದಾರೆ. ಈ ಚಿತ್ರವನ್ನು ರಂಗಿತರಂಗ ಖ್ಯಾತಿಯ ಅನೂಪ್ ಭಂಡಾರಿ ನಿರ್ದೇಶಿಸಿದ್ದು, ಅನೂಪ್ ತಮ್ಮ ನಿರೂಪ್ ನಾಯಕನಾಗಿ ಅಭಿನಯಿಸಿದ್ದಾರೆ.

ಚಿತ್ರದಲ್ಲಿ ತೆಲುಗು ನಟ ಆರ್ಯ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಆವಂತಿಕಾ ಶೆಟ್ಟಿ ನಿರೂಪ್‍ಗೆ ನಾಯಕಿಯಾಗಿ ಅಭಿನಯಿಸಿದ್ದಾರೆ. ರಾಜರಥ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಜನವರಿ 25ರಂದು ರಿಲೀಸ್ ಆಗ್ತಿದೆ.

Comments

Leave a Reply

Your email address will not be published. Required fields are marked *