ಭರವಸೆಯಂತೆ ಸಂಪೂರ್ಣ ಸಾಲಮನ್ನಾ ಮಾಡಿ: ಚಾಮರಾಜನಗರದಲ್ಲಿ ರೈತರಿಂದ ಪ್ರತಿಭಟನೆ

ಚಾಮರಾಜನಗರ: ರಾಜ್ಯದ ರೈತರ ಸಂಪೂರ್ಣ ಸಾಲವನ್ನು ಮನ್ನಾ ಮಾಡಬೇಕೆಂದು ಜಿಲ್ಲಾ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕಾರ್ಯಕರ್ತರು ನಗರದ ಪ್ರವಾಸಿಮಂದಿರದಿಂದ ಹೊರಟು ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ನೂರಾರು ರೈತರು ಜಿಲ್ಲಾಡಳಿತ ಭವನದ ಮುಂದೆ ಜಮಾಯಿಸಿ ಧರಣಿ ನಡೆಸಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ ಹದಿನೈದು ದಿನಗಳಲ್ಲಿ ರೈತರ ಸಾಲ ಸಂಪೂರ್ಣ ಮನ್ನಾ ಮಾಡುವುದಾಗಿ ಬೆಂಗಳೂರಿನಲ್ಲಿ ನಡೆದ ರೈತ ಸಭೆಯಲ್ಲಿ ಭರವಸೆ ನೀಡಿದ್ದರು. ಅಲ್ಲದೇ ರೈತರ ಮನೆಗೆ ಋಣಮುಕ್ತ ಪತ್ರ ತಲುಪಿಸುವುದಾಗಿ ಭರವಸೆ ನೀಡಿದ್ದರು. ಆದರೆ ಈಗ ಇನ್ನಿಲ್ಲದ ಕಾರಣಗಳನ್ನು ಹೇಳುತ್ತಾ ತಾವು ನೀಡಿದ್ದ ಭರವಸೆಯಿಂದ ವಿಮುಖರಾಗುತ್ತಿದ್ದಾರೆ ಎಂದು ಪ್ರತಿಭಟನಾನಿರತ ರೈತರು ಆರೋಪಿಸಿದರು. ರೈತರ ಜೊತೆಗಿನ ಸಾಲಮನ್ನಾ ಸಭೆಯಲ್ಲಿ ಏನೇನು ಚರ್ಚೆ ನಡೆಯಿತು? ಇದನ್ನೂ ಓದಿ:  15 ದಿನಗಳ ಕಾಲಾವಕಾಶ ಕೋರಿದ ಸಿಎಂ: ಸಾಲ ಮನ್ನಾ ಸ್ಕೀಂ ಹೇಗೆ?

ಈಗಾಗಲೇ ಸಾಲದ ಸುಳಿಯಲ್ಲಿ ಸಿಲುಕಿ ರೈತರು ಸಂಕಷ್ಟದಲ್ಲಿದ್ದಾರೆ. ಅಲ್ಲದೇ ಹಲವಾರು ರೈತರು ಸಾಲಬಾಧೆ ತಾಳಲಾರದೇ ಸಾವಿಗೆ ಶರಣಾಗಿದ್ದಾರೆ. ಹಾಗಾಗಿ ರಾಜ್ಯ ಸರ್ಕಾರ ಕೂಡಲೇ ರೈತರ ನೆರವಿಗೆ ಧಾವಿಸಬೇಕು. ಅವರ ಸಂಪೂರ್ಣ ಸಾಲವನ್ನು ಮನ್ನಾ ಮಾಡಬೇಕೆಂದು ಆಗ್ರಹಿಸಿದರು.

Comments

Leave a Reply

Your email address will not be published. Required fields are marked *