ಪಾಕ್‌ ಬಗ್ಗುಬಡಿದು ಗೆದ್ದು ಬೀಗಿದ ಭಾರತ – ಫ್ಯಾನ್ಸ್‌ ಥ್ರಿಲ್‌

ಬೆಂಗಳೂರು: ದೆಹಲಿಯಲ್ಲಿ ನಡೆದ ಚಾಂಪಿಯನ್ಸ್‌ ಟ್ರೋಫಿ ಪಂದ್ಯದಲ್ಲಿ ಪಾಕ್‌ ವಿರುದ್ಧ ಭಾರತ ಭರ್ಜರಿ ಜಯ ಸಾಧಿಸುತ್ತಿದ್ದಂತೆ ಕ್ರಿಕೆಟ್‌ ಅಭಿಮಾನಿಗಳು ಥ್ರಿಲ್‌ ಆಗಿದ್ದಾರೆ. ಟೀಂ ಇಂಡಿಯಾ ಗೆಲುವನ್ನು ಎಲ್ಲೆಡೆ ಸಂಭ್ರಮಾಚರಣೆ ಮಾಡಿದ್ದಾರೆ.

ಬೆಂಗಳೂರಿನ ಹಲವೆಡೆ ರೋಹಿತ್‌ ಶರ್ಮಾ ಪಡೆ ಗೆಲುವನ್ನು ಸಂಭ್ರಮಿಸಲಾಗಿದೆ. ಭಾರತ ಗೆಲುವು ದಾಖಲಿಸುತ್ತಿದ್ದಂತೆ ಇತ್ತ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಕಿಂಗ್‌ ಕೊಹ್ಲಿ ಶತಕವನ್ನು ಕೊಂಡಾಡಿದ್ದಾರೆ. ಇದನ್ನೂ ಓದಿ: ಕಿಂಗ್‌ ಕೊಹ್ಲಿ ಶತಕದೊಂದಿಗೆ ಭಾರತಕ್ಕೆ ವಿಜಯಮಾಲೆ – ಹೈವೋಲ್ಟೇಜ್‌ ಪಂದ್ಯದಲ್ಲಿ ಪಾಕ್‌ಗೆ ಸೋಲು

ನಗರದ ಪಬ್‌ಗಳಲ್ಲಿ ಡಿಜೆ ಸಾಂಗ್‌ಗಳನ್ನು ಹಾಕಿ ಫ್ಯಾನ್ಸ್‌ ಕುಣಿದು ಕುಪ್ಪಳಿಸಿದ್ದಾರೆ. ಈ ಬಾರಿ ಭಾರತ ಚಾಂಪಿಯನ್ಸ್‌ ಟ್ರೋಫಿ ಗೆಲ್ಲಲಿ ಎಂದು ಶುಭಹಾರೈಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಹನುಮಂತಪ್ಪ ವೃತ್ತದಲ್ಲಿ ಪಟಾಕಿ‌ ಸಿಡಿಸಿ ಸೆಲಬ್ರೇಟ್‌ ಮಾಡಿದ್ದಾರೆ. ಪಾಕಿಸ್ತಾನ ವಿರುದ್ದ ಧಿಕ್ಕಾರ ಕೂಗಿ, ವಿರಾಟ್ ಕೊಹ್ಲಿಗೆ ಜೈಕಾರ ಕೂಗಿದ್ದಾರೆ. ಇದೇ ವೇಳೆ, ನರೇಂದ್ರ ಮೋದಿಗೂ ಜೈಕಾರ ಕೂಗಿ ಸಂಭ್ರಮಿಸಿದ್ದಾರೆ. ಇದನ್ನೂ ಓದಿ: Champions Trophy: ಅತಿ ಹೆಚ್ಚು ಕ್ಯಾಚ್ ಪಡೆದ ಫೀಲ್ಡರ್, 14,000 ರನ್ ಮೈಲುಗಲ್ಲು – ಎರಡು ದಾಖಲೆ ಬರೆದ ಕೊಹ್ಲಿ

ಬೆಳಗಾವಿಯ ಗೊಂದಳಿ ಗಲ್ಲಿಯಲ್ಲಿ ಪಟಾಕಿ ಸಿಡಿಸಿ, ಮ್ಯೂಸಿಕ್‌ಗೆ ಡ್ಯಾನ್ಸ್ ಮಾಡಿ ಫ್ಯಾನ್ಸ್‌ ಥ್ರಿಲ್‌ ಆಗಿದ್ದಾರೆ. ಕೈಯಲ್ಲಿ ತ್ರಿವರ್ಣ ಧ್ವಜ ಹಿಡಿದು ಕ್ರಿಕೆಟ್‌ ಅಭಿಮಾನಿಗಳು ಕುಣಿದು ಕುಪ್ಪಳಿಸಿದ್ದಾರೆ.

ಹುಬ್ಬಳ್ಳಿಯ ಚನ್ನಮ್ಮ ವೃತ್ತ, ಚಿತ್ರದುರ್ಗ, ರಾಯಚೂರು ಸೇರಿದಂತೆ ಹಲವೆಡೆ ಟೀಂ ಇಂಡಿಯಾ ಅಭಿಮಾನಿಗಳು ಗೆಲುವನ್ನು ಸಂಭ್ರಮಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನ ಆಲೌಟ್‌ – ಭಾರತಕ್ಕೆ 242 ರನ್‌ಗಳ ಟಾರ್ಗೆಟ್‌