ಭಾರತ ಭಾರೀ ನಷ್ಟದಲ್ಲಿರೋದ್ರಿಂದ ಮತ್ತೆ ಸಂಘರ್ಷ ಮರುಕಳಿಸೋ ಸಾಧ್ಯತೆ ಕಡಿಮೆ: ಪಾಕ್‌ ಸಚಿವ ಇಶಾಕ್‌ ದಾರ್‌

ಇಸ್ಲಾಮಾಬಾದ್‌: ಭಾರತ ಭಾರೀ ನಷ್ಟ ಅನುಭವಿಸುತ್ತಿರುವುದರಿಂದ 2 ರಾಷ್ಟ್ರಗಳ ನಡುವೆ ಪೂರ್ಣ ಪ್ರಮಾಣದ ಯುದ್ಧ ಸಂಭವಿಸುವ ಸಾಧ್ಯತೆಗಳು ತೀರಾ ಕಡಿಮೆ ಅಂತ ಪಾಕಿಸ್ತಾನದ (Pakistan) ಸಚಿವ ಇಶಾಕ್‌ ದಾರ್‌ (Ishaq Dar) ಹೇಳಿದ್ದಾರೆ.

ಗಡಿಯಲ್ಲಿ ಭಾರತದಿಂದ ಉಂಟಾದ ಭಾರೀ ನಷ್ಟಗಳ ಬಗ್ಗೆ ವರದಿಯಾಗುತ್ತಿದ್ದಂತೆ ಇಸ್ಲಾಮಾಬಾದ್‌ನಲ್ಲಿ (Islamabad) ಮಾಧ್ಯಮಗಳೊಂದಿಗೆ ಅವರು ಮಾತನಾಡಿ, ಪಾಕಿಸ್ತಾನ ಶಾಂತಿ ಮಾತುಕತೆಗೆ ಸಿದ್ಧವಾಗಿದ್ದರೂ ಭಾರತ ಆಸಕ್ತಿ ತೋರುತ್ತಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಕೃಷಿ ಬೆಳೆಯನ್ನೇ ಧ್ವಂಸ ಮಾಡೋ ಅಪಾಯಕಾರಿ ಶಿಲೀಂಧ್ರ ಕಳ್ಳ ಸಾಗಾಣೆ-ಅಮೆರಿಕದಲ್ಲಿ ಇಬ್ಬರು ಚೀನಿಯರು ಅರೆಸ್ಟ್‌

ಸಿಂಧೂ ಜಲ ಒಪ್ಪಂದ ಸೇರಿದಂತೆ ಬಹು ವಿವಾದಾತ್ಮಕ ವಿಷಯಗಳನ್ನೊಳಗೊಂಡ ಸಮಗ್ರ ಚರ್ಚೆಗೆ ಪಾಕಿಸ್ತಾನ ಮುಕ್ತವಾಗಿದೆ. ಆದ್ರೆ ಭಾರತ ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಮಾತ್ರ ತೊಡಗಿಕೊಂಡಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉಗ್ರ ಪ್ರೇಮಿ ಪಾಕ್‌ಗೆ ಮಿಲಿಟರಿ ಬಜೆಟ್ಟೇ ಭಸ್ಮಾಸುರ!?

ಮುಂದುವರಿದು.. ಭಾರತದ ಎಲ್‌ಒಸಿ ಬಳಿ ಗಡಿಯಾಚೆಗಿನ ಭಯೋತ್ಪಾದನೆ ಕಾರ್ಯಾಚರಣೆ ವೇಳೆ ಭಾರೀ ನಷ್ಟ ಅನುಭವಿಸಿದೆ ಅನ್ನೋ ಮಾಹಿತಿಗಳು ಬಂದಿವೆ ಎಂದಿದ್ದಾರೆ. ಆದ್ರೆ ಪಾಕಿಸ್ತಾನದ ಉತ್ತನ ಅಧಿಕಾರಿಗಳು ಈ ಬಗ್ಗೆ ಎಲ್ಲಿಯೂ ಅಧಿಕೃತ ಹೇಳಿಕೆಗಳನ್ನ ನೀಡಿಲ್ಲ. ಇದನ್ನೂ ಓದಿ: ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಉಪ್ಪಿನ ಬಿಕ್ಕಟ್ಟು – ಕಾರಣ ಏನು?

ಕಳೆದ ಏಪ್ರಿಲ್‌ 22ರಂದು ಪಹಲ್ಗಾಮ್‌ನಲ್ಲಿ ನಡೆದಿದ್ದ ಭಯೋತ್ಪಾದಕ ದಾಳಿ ಬಳಿಕ ನಡೆದ ಭದ್ರತಾ ಸಂಪುಟ ಸಮಿತಿಯಲ್ಲಿ ಭಾರತ ಸಿಂಧೂ ಜಲಒಪ್ಪಂದವನ್ನು ರದ್ದುಗೊಳಿಸುವ ತೀರ್ಮಾನ ಕೈಗೊಂಡಿತ್ತು. ಆದ್ರೆ ಪಾಕಿಸ್ತಾನದ ಶೇ.80 ರಷ್ಟು ಕೃಷಿ ಭೂಮಿಗೆ ಈ ನೀರಿನ ಮೂಲವೇ ಆಧಾರವಾಗಿದೆ. ಸದ್ಯ ಭಾರತದಿಂದ ನೀರಿನ ಪ್ರಮಾಣ ಇಳಿಕೆ ಮಾಡಿರೋದ್ರಿಂದ ಕೃಷಿಯಲ್ಲೂ ಪಾಕಿಸ್ತಾನ ನಷ್ಟ ಅನುಭವಿಸುವ ಆತಂಕದಲ್ಲಿದೆ ಎಂದು ತಿಳಿದುಬಂದಿದೆ.