ಗುರೂಜಿ ಹತ್ಯೆ ಪ್ರಕರಣ- ರಸ್ತೆಯಲ್ಲಿ ಜೆಸಿಬಿ ಅಡ್ಡ ನಿಲ್ಲಿಸಿ, ಗನ್ ತೋರಿಸಿ ಹಂತಕರಿಗೆ ಬೇಡಿ ತೊಡಿಸಿದ ಖಾಕಿ

ಬೆಳಗಾವಿ: ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಹಂತಕರನ್ನು ಸಿನಿಮೀಯ ಸ್ಟೈಲ್‍ನಲ್ಲಿ ಬಂಧಿಸಲಾಗಿದೆ.

ಘಟನೆ ನಡೆದ ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು, ಕಾರಲ್ಲಿ ಮುಂಬೈಗೆ ಎಸ್ಕೇಪ್ ಆಗುತ್ತಿದ್ದ ಇಬ್ಬರು ಹಂತಕರಾದ ಧಾರವಾಡದ ಮಹಂತೇಶ್ ಶಿರೂರ ಮತ್ತು ಕಲಘಟಗಿಯ ಮಂಜುನಾಥ್‍ನನ್ನು ರಾಮದುರ್ಗ ಬಳಿ ಸಿನಿಮೀಯ ರೀತಿಯಲ್ಲಿ ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ಮೊಬೈಲ್ ಲೋಕೇಷನ್ ಆಧರಿಸಿ ಬೆನ್ನಟ್ಟಿದ ಪೊಲೀಸರು ಆರೋಪಿಗಳು ಎಸ್ಕೇಪ್ ಆಗದಂತೆ ಸುತ್ತುವರಿದಿದ್ದಾರೆ. ರಸ್ತೆಗೆ ಅಡ್ಡಲಾಗಿ ಜೆಸಿಬಿಗಳು ನಿಂತಿದ್ದರಿಂದ ಆರೋಪಿಗಳು ಎಸ್ಕೇಪ್ ಆಗಲು ಸಾಧ್ಯವಾಗದೆ ಸಿಕ್ಕಿಬಿದ್ದಿದ್ದಾರೆ. ಆರೋಪಿಗಳು ಓಡಲು ಪ್ರಶ್ನಿಸಿದಾಗ ರಾಮದುರ್ಗ ಡಿವೈಎಸ್ಪಿ ಶೂಟೌಟ್ ಮಾಡೋ ಎಚ್ಚರಿಕೆ ನೀಡಿ ಅರೆಸ್ಟ್ ಮಾಡಿದ್ದಾರೆ. ಇದಕ್ಕೂ ಮುನ್ನ ಮಹಂತೇಶ್ ಶಿರೂರ ಪತ್ನಿ ವನಜಾಕ್ಷಿಯನ್ನು ಪೊಲೀಸ್ರು ಬಂಧಿಸಿದ್ರು. ಮುಂಬೈನಿಂದ ಕುಟುಂಬಸ್ಥರು ಹುಬ್ಬಳ್ಳಿಗೆ ಧಾವಿಸಿದ್ದು, ನಾಳೆ ಹುಬ್ಬಳ್ಳಿಯ ಸುಳ್ಳ ಗ್ರಾಮದ ರಸ್ತೆಯ ಫಾರಂಹೌಸ್‍ನಲ್ಲಿ ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ ನಡೆಯಲಿದೆ. ಸರಳವಾಸ್ತು ಸಿಬ್ಬಂದಿ ಕಣ್ಣೀರಿಟ್ಟಿದ್ದಾರೆ. ಇದನ್ನೂ ಓದಿ: ಚಂದ್ರಶೇಖರ ಗುರೂಜಿ ಹುಬ್ಬಳ್ಳಿ ಹೋಟೆಲ್‌ಗೆ ಹೋಗಿದ್ದು ಯಾಕೆ?

ನಡೆದಿದ್ದೇನು..?: 
ಚಂದ್ರಶೇಖರ ಗುರೂಜಿ ಅವರನ್ನು ಹುಬ್ಬಳ್ಳಿಯ ಖಾಸಗಿ ಹೋಟೆಲ್‍ನಲ್ಲಿ ಭೀಕರವಾಗಿ ಕೊಲ್ಲಲಾಗಿದೆ. 58 ವರ್ಷದ ಚಂದ್ರಶೇಖರ್ ಗುರೂಜಿಯನ್ನು ಭೇಟಿ ಮಾಡಲು ಬಂದ ಅವರ ಮಾಜಿ ಆಪ್ತ ಸಹಾಯಕರು ಈ ಕೃತ್ಯ ಎಸಗಿದ್ದಾರೆ. ಇಂದು ಮಧ್ಯಾಹ್ನ 12.23ರ ಸಮಯಲ್ಲಿ ಹೋಟೆಲ್ ರೂಂನಿಂದ ರಿಸೆಪ್ಶನ್‍ಗೆ ಬಂದ ಚಂದ್ರಶೇಖರ ಗುರೂಜಿ ಪಾದಕ್ಕೆ ಒಬ್ಬ ನಮಸ್ಕರಿಸುವ ಹೊತ್ತಲ್ಲೇ ಅಲ್ಲೇ ನಿಂತಿದ್ದ ಇನ್ನೊಬ್ಬ ಗುರೂಜಿ ಎದೆಗೆ ಚಾಕು ಹಾಕಿದ್ದ. ಇದನ್ನೂ ಓದಿ: ಚಂದ್ರಶೇಖರ್‌ ಗುರೂಜಿ ಹತ್ಯೆ ಪ್ರಕರಣ – ಇಬ್ಬರು ಆರೋಪಿಗಳು ಅರೆಸ್ಟ್‌

ನಂತರ ಇಬ್ಬರೂ ಸೇರಿಕೊಂಡು ಕೇವಲ 40 ಸೆಕೆಂಡ್‍ಗಳ ಅಂತರದಲ್ಲಿ 60ಕ್ಕೂ ಹೆಚ್ಚು ಬಾರಿ ಚುಚ್ಚಿ, ಕತ್ತು ಕೊಯ್ದು ಭೀಕರವಾಗಿ ಕೊಂದಿದ್ದಾರೆ. ರಕ್ತದ ಮಡುವಿನಲ್ಲಿದ್ದ ಚಂದ್ರಶೇಖರ ಗುರೂಜಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹತ್ಯೆ ಬೆನ್ನಲ್ಲೇ ಇಬ್ಬರು ಹಂತಕರು ಅಲ್ಲಿಂದ ಹೊರಗೆ ಓಡಿದ್ದಾರೆ. ಈ ಎಲ್ಲಾ ಭೀಕರ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *