ಚಂದ್ರನ ಅಂತಿಮ ಕಕ್ಷೆ ಪ್ರವೇಶಿಸಿದ ಚಂದ್ರಯಾನ ನೌಕೆ

ಬೆಂಗಳೂರು: ಭಾರತದ ಕನಸಿನ ಚಂದ್ರಯಾನ-3 (Chandrayaan-3) ಬಾಹ್ಯಾಕಾಶ ನೌಕೆ ಬುಧವಾರ ಚಂದ್ರನ ಐದನೇ ಹಾಗೂ ಕೊನೆಯ ಕಕ್ಷೆಯನ್ನು ಯಶಸ್ವಿಯಾಗಿ ಪ್ರವೇಶಿಸಿದೆ. ಈ ಮೂಲಕ ಚಂದ್ರನ (Moon) ಮೇಲ್ಮೈಗೆ ಇನ್ನಷ್ಟು ಹತ್ತಿರವಾಗಿದೆ.

ಬಾಹ್ಯಾಕಾಶ ನೌಕೆ 150 ಕಿ.ಮೀ × 177 ಕಿ.ಮೀ ವೃತ್ತಾಕಾರದ ಕಕ್ಷೆಯನ್ನು ತಲುಪಿದೆ. ಪರಿಣತಿಯೊಂದಿಗೆ ನಡೆಸಿದ ನಿಖರವಾದ ಕುಶಲತೆ ಮಿಷನ್ ಟೈಮ್‌ಲೈನ್‌ನಲ್ಲಿ ಮುಂದಿನ ಕಾರ್ಯಾಚರಣೆಗೆ ಅಡಿಪಾಯ ಹಾಕಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ತಿಳಿಸಿದೆ.

ಇದೀಗ ಲ್ಯಾಂಡರ್ ಮಾಡ್ಯೂಲ್‌ನಿಂದ ಪ್ರೊಪಲ್ಷನ್ ಮಾಡ್ಯೂಲ್ (ಉಡ್ಡಯನ ವಾಹನ) ಪ್ರತ್ಯೇಕಗೊಳ್ಳುವ ಹಂತಕ್ಕೆ ಬಂದಿದೆ. ಇದು ಆಗಸ್ಟ್ 17ರಂದು ನೆರವೇರುವ ಸಾಧ್ಯತೆಯಿದ್ದು, ಇನ್ನೊಂದು ಮೈಲಿಗಲ್ಲನ್ನು ಸಾಧಿಸಲಿದೆ. ಇದನ್ನೂ ಓದಿ: ಬಳ್ಳಾರಿಯಲ್ಲಿ ರಿಷಭ್ ಪಂತ್ ಬ್ಯಾಟಿಂಗ್ – ಅಭಿಮಾನಿಗಳಲ್ಲಿ ಸಂಭ್ರಮ

ಚಂದ್ರಯಾನ-3 ಮಿಷನ್‌ನ ರಾಕೆಟ್ ಜುಲೈ 14ರಂದು ಮಧ್ಯಾಹ್ನ 2:35ಕ್ಕೆ ಶ್ರೀಹರಿಕೋಟದ ಉಡ್ಡಯನ ಕೇಂದ್ರದಿಂದ ಲಾಂಚ್ ಆಗಿತ್ತು. ಭೂಮಿಯ ಕಕ್ಷೆಯಿಂದ ಒಂದೊಂದೇ ಹಂತದಲ್ಲಿ ಚಂದ್ರಯಾನ-3 ನೌಕೆ ಚಂದ್ರನೆಡೆಗೆ ಪ್ರಯಾಣ ಬೆಳೆಸಿದೆ. ಆಗಸ್ಟ್ 23ರಂದು ನೌಕೆ ಚಂದ್ರನ ಮೇಲೆ ಇಳಿಯುವ ಸಾಧ್ಯತೆಯಿದೆ. ಇದನ್ನೂ ಓದಿ: ಗಡಿ ಪ್ರದೇಶಗಳಲ್ಲಿ ಶಾಂತಿ ಕಾಪಾಡಲು ಚೀನಾ ಒಪ್ಪಿದೆ: MEA

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]