ನವದೆಹಲಿ: ಪಂಜಾಬ್ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಸಾಮಾನ್ಯ ವ್ಯಕ್ತಿಯಲ್ಲ. ಒಬ್ಬ ಅಪ್ರಾಮಾಣಿಕ ವ್ಯಕ್ತಿ ಎಂದು ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಅಕ್ರಮ ಮರಳು ದಂಧೆ ವಿಚಾರವಾಗಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಇತ್ತೀಚೆಗಷ್ಟೇ ಚರಣ್‍ಜಿತ್ ಸಿಂಗ್ ಚನ್ನಿ ಅವರ ಸೋದರಳಿಯನ ಮನೆ ಸೇರಿದಂತೆ 10 ರಿಂದ 12 ಕಡೆ ದಾಳಿ ನಡೆಸಿದ್ದರು. ಇದನ್ನೂ ಓದಿ: ಲಡಾಖ್‌ನಲ್ಲಿ ಚೀನಾದಿಂದ ಪ್ಯಾಂಗ್ಯಾಂಗ್ ಸೇತುವೆ ನಿರ್ಮಾಣ – ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ಈ ಕುರಿತಂತೆ ಫಿರೋಜ್‍ಪುರದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅರವಿಂದ್ ಕೇಜ್ರಿವಾಲ್ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಸೇಡು ತೀರಿಸಿಕೊಳ್ಳುವ ಸಲುವಾಗಿ ಈ ದಾಳಿ ನಡೆಸಲಾಗಿದೆ. ಕಳೆದ ವರ್ಷ ಮುಖ್ಯಮಂತ್ರಿಯಾಗಿ ಬೆಳೆಯುತ್ತಿದ್ದ ಸಾಮಾನ್ಯ ವ್ಯಕ್ತಿಯ ಹೆಸರಿಗೆ ಕಳಂಕ ತರಲು ಪ್ರಯತ್ನಿಸಿದ್ದಾರೆ ಎಂದರು. ಇದನ್ನೂ ಓದಿ: ಬಾಲಕಿಯನ್ನು ಎಳೆದೊಯ್ದು ಮನೆ ಮುಂದೆಯೇ ಅತ್ಯಾಚಾರ ಮಾಡ್ದ
ಬುಧವಾರ ಚನ್ನಿ ಸಾಮಾನ್ಯ ವ್ಯಕ್ತಿಯಲ್ಲ. ಒಬ್ಬ ಅಪ್ರಾಮಾಣಿಕ ವ್ಯಕ್ತಿ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ. ಮರಳು ಗಣಿಗಾರಿಕೆ ವಿಚಾರವಾಗಿ ಮುಖ್ಯಮಂತ್ರಿ ಸಂಬಂಧಿಯೊಬ್ಬರ ಮನೆಯ ಮೇಲೆ ದಾಳಿ ನಡೆಸಿರುವುದು ದುಃಖಕರ ವಿಚಾರವಾಗಿದೆ. ಚನ್ನಿಯ ವಿಧಾನಸಭಾ ಕ್ಷೇತ್ರ ಚಮಕೌರ್ ಸಾಹಿಬ್‍ನಲ್ಲಿ ಅಕ್ರಮ ಮರಳು ಗಣಿಗಾರಿಕೆ ಹೇಗೆ ನಡೆಯುತ್ತಿದೆ ಎಂಬುದನ್ನು ತಮ್ಮ ಪಕ್ಷದ ನಾಯಕರು ಈ ಹಿಂದೆಯೇ ಬಹಿರಂಗಪಡಿಸಿದ್ದರು.

ಈ ವಿಚಾರ ಬಹಿರಂಗಗೊಂಡಾಗ ಚನ್ನಿ ಅವರು, ಯಾವುದೇ ಕ್ರಮ ಕೈಗೊಳ್ಳಲಿಲ್ಲ ಮತ್ತು ಅದನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸಿದರು. ಆಗಲೇ ಸಿಎಂ ಮತ್ತು ಅವರ ಕುಟುಂಬದವರು ಅಕ್ರಮ ಮರಳು ದಂಧೆಯಲ್ಲಿ ತೊಡಗಿರುವುದು ಸ್ಪಷ್ಟವಾಗಿತ್ತು. ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುವ ಕುಟುಂಬದಿಂದ ಪಂಜಾಬ್ ಭವಿಷ್ಯದಲ್ಲಿ ಏನನ್ನು ನಿರೀಕ್ಷಿಸಲಾಗುತ್ತದೆ? ಎಂದು ಪ್ರಶ್ನಿಸಿದರು.
ಫೆಬ್ರವರಿ 20 ರಂದು ರಾಜ್ಯದಲ್ಲಿ ವಿಧಾನ ಸಭೆ ಚುನಾವಣೆ ಇದ್ದು, ಈ ಚುನಾವಣೆಗೂ ಮುನ್ನವೇ ಇಡಿ ದಾಳಿಗಳು ಚನ್ನಿ ಅವರ ಸೋದರಳಿಯನಿಗೆ ಸಂಬಂಧಿಸಿದ ಮನೆಯ ಮೇಲೆ ದಾಳಿ ನಡೆಸಿ 8 ಕೋಟಿ ರೂಪಾಯಿ ಸೇರಿದಂತೆ ಸುಮಾರು 10 ಕೋಟಿ ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ.

Leave a Reply