ನವದೆಹಲಿ: ಬಿಜೆಪಿ ಅಧ್ಯಕ್ಷ ಅಮೀತ್ ಷಾ ಅವರ ನೇತೃತ್ವದಲ್ಲಿ ಛತ್ತೀಸಗಢ ರಾಜ್ಯದ ಕಾಂಗ್ರೆಸ್ ಉಪಾಧ್ಯಕ್ಷ ಗಣರಾಮ್ ಸಾಹು ಬಿಜೆಪಿ ಸೇರಿದ್ದಾರೆ.
ಇಂದು ಛತ್ತೀಸ್‍ಗಢದ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ರಾಜ್ಯದ ಬಸ್ತರ್, ಬಿಜಾಪೂರ್, ನಾರಾಯಣಪೂರ್ ಸೇರಿದಂತೆ 27 ಜಿಲ್ಲೆಗಳಲ್ಲಿ ಚುನಾವಣೆ ನಡೆಯುತ್ತಿದೆ. ಗಣರಾಮ್ ಸಾಹು ಅವರಿಗೆ ದುರ್ಗ ನಗರ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ನೀಡಲು ನಿರಾಕರಿಸಲಾಗಿತ್ತು. ಟಿಕೆಟ್ ನೀಡದ್ದಕ್ಕೆ ಮುನಿಸುಗೊಂಡಿದ್ದ ಗಣರಾಮ್ ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ಬಿಜೆಪಿ ಸೇರಿದ್ದಾರೆ.

ಬುಡಕಟ್ಟು ಪ್ರಾಬಲ್ಯವಿರುವ ರಾಜ್ಯದಲ್ಲಿ ಅಧಿಕಾರ ಕಾಯ್ದುಕೊಳ್ಳಲು ಒಂದೆಡೆ ಬಿಜೆಪಿ ಹರಸಾಹಸ ಪಡುತ್ತಿದ್ದರೆ, ಇನ್ನೊಂದೆಡೆ 15 ವರ್ಷದ ನಂತರ ಅಧಿಕಾರಕ್ಕೆ ಮರಳಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ.
ಕಳೆದ 15 ದಿನಗಳಲ್ಲಿ ನಕ್ಸಲಿಯರು ಚುನಾವಣೆಯನ್ನು ನಿಲ್ಲಿಸಬೇಕು ಎಂದು ಸುಮಾರು 15 ಮಂದಿಯನ್ನು ಹತ್ಯೆ ಮಾಡಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಕೇಂದ್ರ ಪ್ಯಾರಾಮಿಲಿಟರಿ ಪಡೆಯ ಸೈನಿಕರು ಸೇರಿ 1 ಲಕ್ಷಕ್ಕಿಂತ ಹೆಚ್ಚು ಭದ್ರತಾ ಸಿಬ್ಬಂದಿ, ಚುನಾವಣೆ ನಡೆಯುವ ಸ್ಥಳದಲ್ಲಿ ನಿಯೋಜನೆಗೊಂಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Leave a Reply