ರಾಮನಗರ: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದು ಸಾಕುಪ್ರಾಣಿಗಳನ್ನು ಕೊಂದು ತಿನ್ನುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇಟ್ಟಿದ್ದ ಬೋನಿನಲ್ಲಿ ಸೆರೆಯಾಗಿದೆ.
ರಾಮನಗರ ತಾಲೂಕಿನ ಅರೇಹಳ್ಳಿ, ಬಿಳಗುಂಬ ಗ್ರಾಮಗಳಲ್ಲಿ ಕಳೆದ 15 ದಿನಗಳಿಂದ ಚಿರತೆಯ ಉಪಟಳ ಜಾಸ್ತಿಯಾಗಿತ್ತು. ಎರಡು ಮೇಕೆ, ಕುರಿ ಹಾಗೂ ನಾಯಿಯನ್ನ ಚಿರತೆ ಹೊತ್ತೊಯ್ದಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರು ನೀಡಿದ್ದರು.

ಅರಣ್ಯ ಇಲಾಖೆ ಅಧಿಕಾರಿಗಳು ಅರೇಹಳ್ಳಿ ಗ್ರಾಮದ ಮರಿಚಿಕ್ಕೇಗೌಡ ಎಂಬವರ ಜಮೀನಿನಲ್ಲಿ ಚಿರತೆ ಸೆರೆಗಾಗಿ ಕಳೆದ ಮೂರು ದಿನಗಳ ಹಿಂದೆ ಬೋನು ಇಟ್ಟಿದ್ದರು. ತಡರಾತ್ರಿ ಆಹಾರ ಅರಸಿ ಬಂದ ಮೂರುವರೆ ವರ್ಷದ ಹೆಣ್ಣು ಚಿರತೆ ಬೋನಿನಲ್ಲಿ ಸೆರೆಯಾಗಿದೆ. ಚಿರತೆ ಹಾವಳಿಯಿಂದ ಬೇಸತ್ತಿದ್ದ ಗ್ರಾಮಸ್ಥರು ಈಗ ನಿಟ್ಟುಸಿರು ಬಿಟ್ಟಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬನ್ನೇರುಘಟ್ಟ ಅರಣ್ಯ ಪ್ರದೇಶಕ್ಕೆ ಚಿರತೆಯನ್ನ ರವಾನಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply