ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ – 9 ಸಾವು, 20 ಮಂದಿಗೆ ಗಾಯ

ಲಕ್ನೋ: ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡು 9 ಮಂದಿ ಸಾವನ್ನಪ್ಪಿದ್ದು, 20 ಜನರು ಗಾಯಗೊಂಡಿರುವ ಘಟನೆ ಇಂದು ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ನಡೆದಿದೆ.

ದೆಹಲಿಯಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.  ಇದನ್ನೂ ಓದಿ: ಹೈದರಾಬಾದ್ ಗ್ಯಾಂಗ್ ರೇಪ್ ತನಿಖೆ CBIಗೆ ವಹಿಸುವಂತೆ ಬಿಜೆಪಿ ಒತ್ತಾಯ

ಹಾಪುರ್‍ನಲ್ಲಿರುವ ಎಲೆಕ್ಟ್ರಾನಿಕ್ ಉಪಕರಣಗಳ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ 20 ಮಂದಿ ಗಾಯಗೊಂಡಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ಘಟನೆಯ ಕುರಿತು ತನಿಖೆ ಮಾಡುತ್ತಿದ್ದೇವೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹಾಪುರ್ ಇನ್‌ಸ್ಪೆಕ್ಟರ್ ಜನರಲ್ ಪ್ರವೀಣ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಹೈದರಾಬಾದ್ ಗ್ಯಾಂಗ್ ರೇಪ್ ತನಿಖೆ CBIಗೆ ವಹಿಸುವಂತೆ ಬಿಜೆಪಿ ಒತ್ತಾಯ

ಪ್ರಧಾನಿ ನರೇಂದ್ರ ಮೋದಿ ದುರಂತದ ಕುರಿತು ಸಂತಾಪ ಸೂಚಿಸಿದ್ದು, ರಾಜ್ಯ ಸರ್ಕಾರವು ಗಾಯಾಳುಗಳ ಚಿಕಿತ್ಸೆಗೆ ತ್ವರಿತವಾಗಿ ತೊಡಗಿಸಿಕೊಂಡಿದೆ. ಉತ್ತರ ಪ್ರದೇಶದ ಹಾಪುರದ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ನಡೆದ ಘಟನೆ ಹೃದಯವಿದ್ರಾವಕವಾಗಿದೆ. ಇದರಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಸಂತಾಪವನ್ನು ತಿಳಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಘಟನೆಯ ಕುರಿತು ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಹ ಸಂತಾಪ ಸೂಚಿಸಿದ್ದು, ಅಧಿಕಾರಿಗಳು ಘಟನಾ ಸ್ಥಳಕ್ಕೆ ತೆರಳಿ ರಕ್ಷಣಾ ಮತ್ತು ಪರಿಹಾರ ಕ್ರಮಗಳನ್ನು ಮೇಲ್ವಿಚಾರಣೆ ಮಾಡಲು ಹೇಳಿದ್ದಾರೆ. ಸಂತ್ರಸ್ತರಿಗೆ ಮತ್ತು ಅವರ ಕುಟುಂಬಗಳಿಗೆ ಸಾಧ್ಯವಾದಷ್ಟೂ ಎಲ್ಲ ಸಹಾಯವನ್ನು ನೀಡುವಂತೆ ಜಿಲ್ಲಾಡಳಿತದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಷ್ಟೇ ಅಲ್ಲದೆ ಅಪಘಾತದ ಬಗ್ಗೆ ತಜ್ಞರಿಂದ ತನಿಖೆ ನಡೆಸುವಂತೆ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *