CJI ಹುದ್ದೆಗೆ ನ್ಯಾ. ಸಂಜೀವ್ ಖನ್ನಾ ಹೆಸರು ಶಿಫಾರಸು

ನವದೆಹಲಿ: ಸುಪ್ರೀಂ ಕೋರ್ಟ್‌ನ ಹಾಲಿ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌ (DY Chandrachud) ಅವರು, ಮುಂದಿನ ಸಿಜೆಐ (CJI) ಆಗಿ ಅಧಿಕಾರ ವಹಿಸಿಕೊಳ್ಳಲು ನ್ಯಾಯಮೂರ್ತಿ ಸಂಜೀವ್‌ ಖನ್ನಾ (Sanjiv Khanna) ಅವರ ಹೆಸರು ಶಿಫಾರಸು ಮಾಡಿದ್ದಾರೆ.

ಮುಂದಿನ ನವೆಂಬರ್‌ 11ರಂದು ಸಿಜೆಐ ಹುದ್ದೆಯಿಂದ ಚಂದ್ರಚೂಡ್‌ ನಿವೃತ್ತಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಮೆಮೊರಾಂಡಮ್ ಆಫ್ ಪ್ರೊಸೀಜರ್ ಪ್ರಕಾರ, ಮುಂದಿನ ಶಿಫಾರಸು ಕಳುಹಿಸುವಂತೆ ಕೇಂದ್ರ ಸರ್ಕಾರ (Central Government) ಕಳೆದ ಶುಕ್ರವಾರ ಚಂದ್ರಚೂಡ್‌ ಅವರಿಗೆ ಪತ್ರ ಬರೆದಿತ್ತು. ಇದಕ್ಕೆ‌ ಪ್ರತಿಕ್ರಿಯಿಸಿ ಪತ್ರ ಬರೆದಿರುವ ಚಂದ್ರಚೂಡ್‌ ಅವರು ತಮ್ಮ ಉತ್ತರಾಧಿಕಾರಿಯಾಗಿ ಸಂಜೀವ್‌ ಖನ್ನಾ ಅವರ ಹೆಸರನ್ನ ಶಿಫಾರಸು ಮಾಡಿದ್ದಾರೆ. ಸರ್ಕಾರದ ಅನುಮೋದನೆ ನಂತರ ನ್ಯಾ. ಸಂಜೀವ್ ಖನ್ನಾ 51ನೇ ಸಿಜೆಐಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

2022ರ ನವೆಂಬರ್ 8ರಂದು ಸಿಜೆಐ ಉದಯ್ ಉಮೇಶ್ ಲಲಿತ್ (UU Lalit) ಅವರು ನಿವೃತ್ತಿ ಹೊಂದಿದ ಬಳಿಕ ಚಂದ್ರಚೂಡ್‌ ಸುಪ್ರೀಂ ಕೋರ್ಟ್‌ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಚಂದ್ರಚೂಡ್ ಅವರು ಅಧಿಕಾರ ಸ್ವೀಕರಿಸಿದ್ದರು. ಯುಯು ಲಲಿತ್‌ ಅವರಿಗೂ ಮುನ್ನ ಎನ್.ವಿ.ರಮಣ (NV Ramana) ಅವರು 48ನೇ ಸಿಜೆಐ ಆಗಿ ಅಧಿಕಾರ ನಿರ್ವಹಿಸಿದ್ದರು. ಇದನ್ನೂ ಓದಿ: ಸ್ನೇಹಿತನ ವಿರುದ್ಧ ಸೇಡು ತೀರಿಸಿಕೊಳ್ಳಲು 4 ವಿಮಾನಗಳಿಗೆ ಬಾಂಬ್ ಬೆದರಿಕೆ – ಮುಂಬೈನಲ್ಲಿ ಅಪ್ರಾಪ್ತ ಅರೆಸ್ಟ್‌

ಚಂದ್ರಚೂಡ್ ಹಿನ್ನೆಲೆ ಏನು?
ಎಲ್‌ಎಲ್‌ಎಂ ಪೂರ್ಣಗೊಳಿಸಿದ ನ್ಯಾ. ಚಂದ್ರಚೂಡ್ ಅವರು ಡಾಕ್ಟರ್ ಇನ್ ಜುಡಿಷಿಯಲ್ ಸೈನ್ಸಸ್ ಪದವಿಯನ್ನು ಅಮೆರಿಕದ ಹಾರ್ವರ್ಡ್ ಕಾನೂನು ಶಾಲೆಯಿಂದ ಪಡೆದಿದ್ದಾರೆ. ಇದಕ್ಕೂ ಮುನ್ನ ಅವರು ದೆಹಲಿಯ ಸೇಂಟ್ ಸ್ಟೀಫನ್ಸ್ ಕಾಲೇಜಿನಿಂದ ಅರ್ಥಶಾಸ್ತ್ರದಲ್ಲಿ ಬಿಎ ಪದವಿ ಪಡೆದಿದ್ದರು. ದೆಹಲಿ ವಿಶ್ವವಿದ್ಯಾಲಯದ ಕ್ಯಾಂಪಸ್ ಲಾ ಸೆಂಟರ್‌ನಿಂದ ಎಲ್‌ಎಲ್‌ಬಿ ಪದವಿ ಪಡೆದಿದ್ದರು. ಸುಪ್ರೀಂ ಕೋರ್ಟ್ ಮತ್ತು ಬಾಂಬೆ ಹೈಕೋರ್ಟ್‌ನಲ್ಲಿ ವಕೀಲರಾಗಿ ಪ್ರಾಕ್ಟೀಸ್ ಮಾಡಿದ್ದ ನ್ಯಾ. ಚಂದ್ರಚೂಡ್ ಅವರನ್ನು ಬಾಂಬೆ ಹೈಕೋರ್ಟ್ 1998ರ ಜೂನ್‌ನಲ್ಲಿ ಹಿರಿಯ ವಕೀಲರಾಗಿ ಪದೋನ್ನತಿ ನೀಡಿತ್ತು. ಇದನ್ನೂ ಓದಿ: 2025-26ರ ಹಿಂಗಾರು ಬೆಳೆಗಳ ಬೆಂಬಲ ಬೆಲೆ ಹೆಚ್ಚಳ – ಎಷ್ಟು ಏರಿಕೆಯಾಗಿದೆ?

2000 ಇಸವಿಯಲ್ಲಿ ಬಾಂಬೆ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕವಾಗುವುದಕ್ಕೂ ಮೊದಲು 1998ರಿಂದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ಅವರು ಕೆಲಸ ಮಾಡಿದ್ದರು. 2013ರ ಅಕ್ಟೋಬರ್ 31ರಂದು ನ್ಯಾ. ಚಂದ್ರಚೂಡ್ ಅವರನ್ನು ಅಲಾಹಾಬಾದ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಿತ್ತು. 2016ರ ಮೇ 13ರಂದು ನ್ಯಾ. ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪದೋನ್ನತಿ ಪಡೆದರು. ನಂತರ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ 2 ವರ್ಷ ಅಧಿಕಾರ ಪೂರೈಸಿದ ಸಾಧನೆ ಇವರದ್ದಾಗಲಿದೆ.  ಇದನ್ನೂ ಓದಿ: BMW i7 ಇವಿ ಕಾರಿಗೆ ನಿಂಬೆಹಣ್ಣು, ಮೆಣಸಿನಕಾಯಿ ಕಟ್ಟಿ ಪೂಜೆ ಸಲ್ಲಿಸಿದ ಜರ್ಮನ್ ರಾಯಭಾರಿ