ಬೆಂಗಳೂರು: ಕಾಂಗ್ರೆಸ್ (Congress) ಅವರು ತಮ್ಮ ವಿಚಾರಗಳಲ್ಲಿ ದಿವಾಳಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ವಾಗ್ದಾಳಿ ನಡೆಸಿದ್ದಾರೆ.

ಮತದಾರರ ಸಮೀಕ್ಷೆ ಹೆಸರಿನಲ್ಲಿ ಖಾಸಗಿತನಕ್ಕೆ ಕನ್ನ ಹಾಕಲಾಗಿದೆ ಎಂಬ ಕಾಂಗ್ರೆಸ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಚುನಾವಣಾ ಆಯೋಗ ಸ್ವೀಪ್ ಕಾರ್ಯಕ್ರಮ ಕೈಗೊಳ್ಳಲು ಬಿಬಿಎಂಪಿ (BBMP) ಹಾಗೂ ಸ್ಥಳೀಯ ಸಂಸ್ಥೆಗಳಿಗೆ ವಹಿಸಿರುತ್ತಾರೆ. ಅವರು ಸಮೀಕ್ಷಾ ಕೆಲಸವನ್ನು ಎನ್‍ಜಿಓಗಳಿಗೆ ನೀಡಿರುತ್ತಾರೆ. ಇದೇನು ಮೊದಲ ಬಾರಿ ನೀಡಿರುವುದಲ್ಲ. 2018ರಲ್ಲಿ ಇದ್ದ ಸರ್ಕಾರದ ಕಾಲದಲ್ಲಿಯೂ ನೀಡಿದ್ದಾರೆ ಎಂದಿದ್ದಾರೆ.

ಎನ್‍ಜಿಒ, ಬಿ.ಎಲ್.ಡಿ ದುರ್ಬಳಕೆ ಮಾಡಿದ್ದಾರೆ. ಆದ್ದರಿಂದ ಚುನಾವಣಾ ಆಯೋಗ ನೀಡಿರುವ ಆದೇಶದಿಂದ ಮೊದಲುಗೊಂಡು ಇಡೀ ಪ್ರಕರಣದ ಸಮಗ್ರ ತನಿಖೆಗೆ ಸೂಚನೆ ನೀಡುತ್ತೇನೆ. ನಿಜ ಹೊರಗೆ ಬರಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಟಿಪ್ಪು ಪ್ರತಿಮೆ ಬೇಡ ಎಂದ ಸಿಎಂ ಇಬ್ರಾಹಿಂ ವಿರುದ್ಧ ಚೇತನ್ ಕಿಡಿ – ಟಿಪ್ಪು ಸುಲ್ತಾನ್ ಆಧುನಿಕ ಕರ್ನಾಟಕದ ಐಕಾನ್
ಕಾಂಗ್ರೆಸ್ ನನ್ನ ರಾಜೀನಾಮೆಗೆ ಒತ್ತಾಯಿಸುವುದು ಹಾಸ್ಯಾಸ್ಪದ. ಸಂಬಂಧವಿಲ್ಲದ್ದನ್ನು ಕೇಳುತ್ತಿದ್ದಾರೆ. ಅದೇ ಮಾನದಂಡವಾದರೆ ಕಾಂಗ್ರೆಸ್ ಮುಖ್ಯಮಂತ್ರಿಗಳು ಈವರೆಗೆ ಮೂರು ಬಾರಿ ರಾಜೀನಾಮೆ ನೀಡಬೇಕಿತ್ತು. ಇದೊಂದು ಆಧಾರರಹಿತ ಆರೋಪ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಜನರ ಸರ್ವೇ ಮಾಡಿಸಿ ಚುನಾವಣೆಗೆ ಬಳಸಿಕೊಂಡಿದೆ: ಬೊಮ್ಮಾಯಿ

Leave a Reply