ಬೆಳಗಾವಿ: ನಾಯಿಗಳು ಮಗುವನ್ನೇ ತಿನ್ನಲು ಯತ್ನಿಸಿದ್ದು, ಚಿಕಿತ್ಸೆ ಫಲಕಾರಿಯಾದೇ ಮಗು ಮೃತಪಟ್ಟಿರುವ ಘಟನೆ ಬೆಳಗಾವಿ ತಾಲೂಕಿನ ಪಂತಬಾಳೇಕುಂದ್ರಿ ಗ್ರಾಮದಲ್ಲಿ ನಡೆದಿದೆ.
2 ವರ್ಷದ ಅಬ್ಬಾಸ್ ಸನದಿ ಮೃತ ದುರ್ದೈವಿ. ಗುರುವಾರ ಬೀದಿ ನಾಯಿಗಳ ದಾಳಿಗೆ ಒಳಗಾಗಿ ಅಬ್ಬಾಸ್ ಸ್ಥಿತಿ ಚಿಂತಾಜನಕವಾಗಿತ್ತು. ಅಬ್ಬಾಸ್ ಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅಬ್ಬಾಸ್ ಮೃತಪಟ್ಟಿದ್ದಾನೆ.

ಅಬ್ಬಾಸ್ ಸನದಿ ಮನೆ ಮುಂದೆ ಶೌಚಕ್ಕೆ ಕುಳಿತಿದ್ದನು. ಈ ವೇಳೆ ಬೀದಿ ನಾಯಿಗಳು ಏಕಾಏಕಿ ಆತನ ಮೇಲೆ ದಾಳಿ ಮಾಡಿತ್ತು. ಪರಿಣಾಮ ಮುಖ, ತಲೆ ಭಾಗ ಸೇರಿ ಮೈಯೆಲ್ಲಾ ಕಚ್ಚಿ, ತಿಂದು ಹಾಕುವ ಪ್ರಯತ್ನ ಮಾಡಿವೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಅಬ್ಬಾಸ್ ನನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅಬ್ಬಾಸ್ ಮೃತಪಟ್ಟಿದ್ದಾನೆ.
ಬೆಳಗಾವಿಯ ಮಾರಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply