ಅರವಿಂದ್ ಕೇಜ್ರಿವಾಲ್ ಮೇಲೆ ಖಾರದ ಪುಡಿ ದಾಳಿ!

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಮ್ ಆದ್ಮಿ ಪಾರ್ಟಿ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೇಲೆ ಅಪರಿಚಿತ ವ್ಯಕ್ತಿಯೋರ್ವ ಖಾರದ ಪುಡಿ ಎಸೆದು ದಾಳಿ ನಡೆಸಿದ್ದಾನೆ.

ಮಂಗಳವಾರ ಮಧ್ಯಾಹ್ನ ಸುಮಾರು 2 ಗಂಟೆಗೆ ಅರವಿಂದ್ ಕೇಜ್ರಿವಾಲ್ ಊಟಕ್ಕೆಂದು ಸಚಿವಾಲಯದಿಂದ ಹೊರಗೆ ಬರುತ್ತಿದ್ದರು. ಈ ವೇಳೆ ಅವರಿಗೆ ಎದುರಾದ ಅಪರಿಚಿತ ವ್ಯಕ್ತಿಯೊಬ್ಬ ಏಕಾಏಕಿ ಅವರ ಕಣ್ಣಿಗೆ ಖಾರದ ಪುಡಿಯನ್ನು ಎಸೆದಿದ್ದಾನೆ. ಅದೃಷ್ಟವಶಾತ್ ಅವರು ಕನ್ನಡಕ ಧರಿಸಿದ್ದರಿಂದ ಯಾವುದೇ ತೊಂದರೆ ಆಗಲಿಲ್ಲವೆಂದು ಎಎಪಿ ಶಾಸಕ ಅಲ್ಕಾ ಲಂಬಾ ಹೇಳಿದ್ದಾರೆ.

ಕೂಡಲೇ ಎಚ್ಚೆತ್ತ ಭದ್ರತಾ ಸಿಬ್ಬಂದಿ ಖಾರದ ಪುಡಿ ದಾಳಿ ನಡೆಸಿದ ಅಪರಿಚಿತ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದಾಳಿ ನಡೆಸಿದ ಆರೋಪಿ ಅನಿಲ್ ಕುಮಾರ್ ಎಂದು ತಿಳಿದು ಬಂದಿದೆ. ಘಟನಾ ಸಂಬಂಧ ಬಂಧಿತ ಆರೋಪಿಯನ್ನು ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ. ಘಟನೆಯನ್ನು ಖಂಡಿಸಿರುವ ಎಎಪಿ ಮುಖ್ಯಸ್ಥರು, ದೆಹಲಿಯಲ್ಲಿ ಮುಖ್ಯಮಂತ್ರಿಗೂ ಸಹ ಸುರಕ್ಷತೆ ಇಲ್ಲದಂತಾಗಿದೆ. ಇದು ಗಂಭೀರವಾದ ಭದ್ರತಾ ವೈಫಲ್ಯವೆಂದು ಆರೋಪಿಸಿದ್ದಾರೆ.

ಈ ಕುರಿತು ಮಾತನಾಡಿರುವ ದೆಹಲಿ ಬಿಜೆಪಿ ಮುಖ್ಯಸ್ಥ ಮನೋಜ್ ತಿವಾರಿ, ಅರವಿಂದ್ ಕೇಜ್ರಿವಾಲ್ ಮೇಲಿನ ದಾಳಿಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಇಂತಹ ದಾಳಿಗಳನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಈ ವಿಷಯವನ್ನು ಗಂಭೀರವಾಗಿ ತನಿಖೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಎಎಪಿಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Comments

Leave a Reply

Your email address will not be published. Required fields are marked *