ನಾಪತ್ತೆಯಾಗಿದ್ದ ಯುವಕನನ್ನು ಶೀಘ್ರವೇ ಬಿಡುಗಡೆ ಮಾಡಲಿದೆ ಚೀನಾ

ನವದೆಹಲಿ: ಜನವರಿ 18ರಂದು ನಾಪತ್ತೆಯಾಗಿದ್ದ ಅರುಣಾಚಲ ಮೂಲದ ಯುವಕನನ್ನು ಕೆಲವು ದಿನಗಳ ಬಳಿಕ ಚೀನಾದಲ್ಲಿ ಪತ್ತೆಹಚ್ಚಲಾಗಿತ್ತು. ಇದೀಗ ಚೀನಾ ಯುವಕನನ್ನು ಬಿಡುಗಡೆ ಮಾಡಲು ಸೂಚನೆ ನೀಡಿದೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.

ಅರುಣಾಚಲ ಪ್ರದೇಶದಿಂದ ನಾಪತ್ತೆಯಾಗಿದ್ದ 17 ವರ್ಷದ ಯುವಕನ ಬಿಡುಗಡೆಗೆ ಚೀನಾ ಸೂಚಿಸಿದ್ದು, ಅದರ ದಿನಾಂಕ ಹಾಗೂ ಸಮಯವನ್ನು ಶೀಘ್ರವೇ ಹಂಚಿಕೊಳ್ಳಲಿದೆ ಎಂದು ತಿಳಿಸಿದ್ದಾರೆ. ಚೀನಾ ಯುವಕನ ಬಿಡುಗಡೆಯ ಸ್ಥಳವನ್ನು ಸೂಚಿಸಿದೆ. ಆದರೆ ಹವಾಮಾನ ವೈಪರಿತ್ಯದಿಂದಾಗಿ ಬಿಡುಗಡೆ ವಿಳಂಬವಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಣ್ಮರೆಯಾಗಿದ್ದ ಯುವಕ ಪತ್ತೆ: ಭಾರತೀಯ ಸೇನೆಗೆ ಚೀನಾ ಮಾಹಿತಿ

ಅಪ್ಪರ್ ಸಿಯಾಂಗ್ ಜಿಲ್ಲೆಯ ಜಿಡೋ ಗ್ರಾಮದ ಯುವಕ ಮಿರಾಮ್ ಟ್ಯಾರೋನ್ 2022ರ ಜನವರಿ 18 ರಂದು ಬಿಶಿಂಗ್ ಪ್ರದೇಶದ ಶಿಯುಂಗ್‌ಲಾದಿಂದ ನಾಪತ್ತೆಯಾಗಿದ್ದ. ಟ್ಯಾರೋನ್‌ನ ಸ್ನೇಹಿತ ಜಾನಿ ಯಾಯಿಂಗ್ ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿ(ಪಿಎಲ್‌ಎ) ಆತನನ್ನು ಅಪಹರಿಸಿದ್ದಾಗಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದ. ಇದನ್ನೂ ಓದಿ: ಚೀನಾದಿಂದ ಅರುಣಾಚಲ ಪ್ರದೇಶದ ಹುಡುಗನ ಅಪಹರಣ – ಪ್ರಧಾನಿ ವಿರುದ್ಧ ರಾಗಾ ಕಿಡಿ

ಭಾರತೀಯ ಸೇನೆ ಪಿಎಲ್‌ಎಯನ್ನು ಸಂಪರ್ಕಿಸಿ ಯುವಕನನ್ನು ಪತ್ತೆ ಹಚ್ಚಿ ಹಿಂದಿರುಗಿಸುವಂತೆ ಮನವಿ ಮಾಡಿತ್ತು. ಬಳಿಕ ಆತ ಪತ್ತೆಯಾಗಿರುವ ಬಗ್ಗೆ ಪಿಎಲ್‌ಎ ಭಾರತೀಯ ಸೇನೆಗೆ ಮಾಹಿತಿ ನೀಡಿತ್ತು.

Comments

Leave a Reply

Your email address will not be published. Required fields are marked *