ಚಾಕಲೇಟ್ ಆಸೆ ತೋರಿಸಿ ಅಪ್ರಾಪ್ತೆಯ ರೇಪ್ ಮಾಡಿ ಕೊಲೆಗೈದ ದುರುಳ

ಕಲಬುರಗಿ: ಚಾಕಲೇಟ್ ಕೊಡಿಸುವುದಾಗಿ 8 ವರ್ಷದ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರವೆಸಗಿ, ಬರ್ಬರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಯಾಕಾಪುರ ಗ್ರಾಮದಲ್ಲಿ ನಡೆದಿದೆ.

ಯಾಕಾಪುರ ಗ್ರಾಮದ ಯಲ್ಲಪ್ಪ(35) ಕೃತ್ಯವೆಸೆಗಿದ ಕಾಮುಕ. ಬಾಲಕಿಗೆ ಚಾಕಲೇಟ್ ಆಸೆ ತೋರಿಸಿ ತನ್ನೊಡನೆ ಕರೆದುಕೊಂಡು ಹೋಗಿ ಕಾಮುಕ ಅತ್ಯಾಚಾರಗೈದಿದ್ದಾನೆ. ಬಳಿಕ ಬಾಲಕಿಯನ್ನು ಬರ್ಬರವಾಗಿ ಕೊಲೆ ಮಾಡಿ, ಶವವನ್ನು ಗ್ರಾಮದ ಹೊರವಲಯದಲ್ಲಿ ಬಿಸಾಡಿದ್ದಾನೆ. ಸೋಮವಾರ ಮಧ್ಯಾಹ್ನ ಶಾಲೆಗೆ ಹೋಗಿದ್ದ ಬಾಲಕಿ ಮನೆಗೆ ಮರಳದಿದ್ದಾಗ ಆತಂಕಗೊಂಡ ಪೋಷಕರು ಹಾಗೂ ಗ್ರಾಮಸ್ಥರು ಪೊಲೀಸರಿಗೆ ದೂರು ನೀಡಿ ಹುಡುಕಾಟ ನಡೆಸಿದ್ದಾರೆ. ಇದನ್ನೂ ಓದಿ: 6ರ ಬಾಲಕಿಯನ್ನು ಅತ್ಯಾಚಾರಗೈದು ಬೆಲ್ಟ್‌ನಿಂದ ಕತ್ತು ಹಿಸುಕಿ ಕೊಂದ ಕಾಮುಕರು

ಆದರೆ ಸಂಜೆ ಸಮಯದಲ್ಲಿ ಯಲ್ಲಪ್ಪ ಜೊತೆ ಬಾಲಕಿ ಓಡಾಡುತ್ತಿರುವದನ್ನು ಕೆಲ ಗ್ರಾಮಸ್ಥರು ನೋಡಿದ್ದು, ಸಂಶಯದ ಮೇಲೆ ಯಲ್ಲಪ್ಪನನ್ನು ಸುಲೇಪೇಠ್ ಠಾಣೆಯ ಪೊಲೀಸರು ವಿಚಾರಿಸಿದ್ದಾಗ ಆರೋಪಿ ಅಸಲಿ ಸತ್ಯವನ್ನು ಬಾಯಿಬಿಟ್ಟಿದ್ದಾನೆ. ತಾನೇ ಅತ್ಯಾಚಾರಗೈದು, ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಇದನ್ನೂ ಓದಿ: ಪಶುವೈದ್ಯೆಯನ್ನು ಕೊಂದಂತೆ ನನ್ನ ಮಗನನ್ನು ಕೊಲ್ಲಿ – ಸಿಡಿದೆದ್ದ ಅತ್ಯಾಚಾರಿಯ ತಾಯಿ

ಈ ಪ್ರಕರಣದಿಂದ ಮೃತ ಬಾಲಕಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆರೋಪಿ ವಿರುದ್ಧ ಸಿಟ್ಟಿಗೆದ್ದಿದ್ದು, ಸದ್ಯ ಇದರಿಂದ ಗ್ರಾಮದಲ್ಲಿ ಎರಡು ಕೋಮಿನ ಮಧ್ಯೆ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಆದ್ದರಿಂದ ಮುಂಜಾಗೃತ ಕ್ರಮವಾಗಿ ಪೊಲೀಸರು ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದಾರೆ. ಇದನ್ನೂ ಓದಿ: ಇಡ್ಲಿ ಆಸೆ ತೋರಿಸಿ 5ರ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ವಿವಾಹಿತ

ಹೈದರಾಬಾದ್‍ನಲ್ಲಿ ಪಶುವೈದ್ಯೆ ಮೇಲಿನ ಪೈಶಾಚಿಕ ಕೃತ್ಯಕ್ಕೆ ಇಡೀ ದೇಶವೇ ಆರೋಪಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಇತ್ತ ಕರ್ನಾಟಕದಲ್ಲಿಯೂ ಹೆಣ್ಣುಮಕ್ಕಳ ಮೇಲೆ ಕಾಮುಕರು ವಿಕೃತಿ ಮೆರೆಯುತ್ತಿರುವುದು ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಾಗಿದೆ.

Comments

Leave a Reply

Your email address will not be published. Required fields are marked *