ಲೈಂಗಿಕ ಕಿರುಕುಳ: ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ವಿರುದ್ಧ ಕೇಸ್

ತೆಲುಗು, ತಮಿಳು ಚಿತ್ರರಂಗದಲ್ಲಿ ಹೆಸರುವಾಸಿಯಾಗಿರುವ ಜಾನಿ ಮಾಸ್ಟರ್ (Jani Master) ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ. ಜಾನಿ ಮಾಸ್ಟರ್ ಲೈಂಗಿಕ ಕಿರುಕುಳ (Sexual Assault) ನೀಡಿದ್ದಾರೆ ಎಂದು 21 ವರ್ಷದ ಯುವತಿಯೊಬ್ಬರು ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ರಾಯದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಜಾನಿ ಮಾಸ್ಟರ್ ಕೆಲವು ದಿನಗಿಳಿಂದ ನನಗೆ ಕಿರುಕುಳ ನೀಡುತ್ತಿದ್ದರು. ಹೊರಾಂಗಣ ಚಿತ್ರೀಕರಣ ವೇಳೆ, ದೈಹಿಕ ಹಲ್ಲೆ ಮತ್ತು ಲೈಂಗಿಕ ದೌರ್ಜನ್ಯ ಎಸೆಗಿದ್ದಾರೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮಹಿಳೆ ನರಸಂಗಿ ನಿವಾಸಿಯಾಗಿರುವುದರಿಂದ ನರಸಂಗಿ ಪೊಲೀಸರಿಗೆ ಪ್ರಕರಣ ವರ್ಗಾಯಿಸಲಾಗಿದ್ದು, ಕ್ರಿಮಿನಲ್ ಬೆದರಿಕೆ ಮತ್ತು ಸ್ವಯಂಪ್ರೇರಿತ ಗಾಯ ಎಂದು ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.