ದಾವಣಗೆರೆ ಗಾಜಿನ ಮನೆಗೆ ಹೆಸರಿಡೋ ವಿಚಾರದಲ್ಲಿ ಜಗಳ-ರಣರಂಗವಾದ ಪಾಲಿಕೆ ಸಾಮಾನ್ಯ ಸಭೆ

ದಾವಣಗೆರೆ: ನಗರದಲ್ಲಿ ನಿರ್ಮಿಸಲಾಗಿರುವ ಗಾಜಿನ ಮನೆಗೆ ಹೆಸರಿಡುವ ವಿಚಾರವಾಗಿ ಎರಡು ಪಕ್ಷಗಳ ಪಾಲಿಕೆ ಸದಸ್ಯರು ಕೈ ಕೈ ಮಿಲಾಯಿಸುವ ಹಂತಕ್ಕೆ ಹೋದ ಘಟನೆ ದಾವಣಗೆರೆಯ ಪಾಲಿಕೆ ಸಾಮಾನ್ಯ ಸಭೆಯಲ್ಲಿ ನಡೆದಿದೆ.

ನಗರದ ಗಾಜಿನ ಮನೆಗೆ ಹೆಸರಿಡುವ ವಿಚಾರದಲ್ಲಿ ಕಾಂಗ್ರೆಸ್-ಬಿಜೆಪಿ ಸದಸ್ಯರು ಜಗಳವಾಡಿ ಕೈ ಮಿಲಾಯಿಸುವ ಹಂತಕ್ಕೆ ತಲುಪಿದರು. ಗಾಜಿನ ಮನೆಗೆ ಶಾಸಕ ಹಾಗೂ ಕಾಂಗ್ರೆಸ್ ನ ಹಿರಿಯ ಮುಖಂಡರಾದ ಶಾಮನೂರು ಶಿವಶಂಕರಪ್ಪ ರವರ ಹೆಸರಿಡುವ ವಿಚಾರವನ್ನು ಸಭೆಯಲ್ಲಿ ಪ್ರಸ್ತಾಪ ಮಾಡಲಾಯಿತು. ಆದರೆ ಇದಕ್ಕೆ ಬಿಜೆಪಿ ಸದಸ್ಯರು ಅಕ್ಷೇಪ ವ್ಯಕ್ತಪಡಿಸಿದರು.

ಬಿಜೆಪಿ ಸದಸ್ಯ ಕುಮಾರ್ ಇದಕ್ಕೆ ಅಕ್ಷೇಪ ವ್ಯಕ್ತಪಡಿಸಿ ಅಸಂವಿಧಾನಿಕ ಪದ ಬಳಕೆ ಮಾಡಿದರು. ಇದರಿಂದ ತಾಳ್ಮೆ ಕಳೆದುಕೊಂಡ ಕಾಂಗ್ರೆಸ್ ಪಕ್ಷದ ದಿನೇಶ್ ಶೆಟ್ಟಿ ಬಿಜೆಪಿ ಸದಸ್ಯರ ವಿರುದ್ಧ ಮುಗಿಬಿದ್ದರು. ಈ ನಡುವೆ ಇಬ್ಬರ ನಡುವೆ ವಾಗ್ವಾದ ನಡೆದು ಕೈಕೈ ಮಿಲಾಯಿಸಿ ಹೊಡೆದಾಟ ನಡೆಸಲು ಮುಂದಾದರು.

ಈ ಹಂತದಲ್ಲಿ ಮಧ್ಯ ಪ್ರವೇಶಿಸಿದ ಇತರೇ ಸದಸ್ಯರು ಇಬ್ಬರನ್ನು ಸಮಾಧಾನಪಡಿಸಿದರು. ಮೇಯರ್ ಶೋಭಾ ಪಲ್ಲಾಘಟ್ಟೆ ಅಧ್ಯಕ್ಷತೆಯಲ್ಲಿ ನಡೆದ ಸಭೆ ಕೆಲ ಕಾಲ ರಣರಂಗವಾಗಿ ಮಾರ್ಪಟ್ಟಿತ್ತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *