ʻಜೈ ಶ್ರೀರಾಮ್ʼ ಘೋಷಣೆ ಕೂಗುತ್ತಿದ್ದ ಯುವಕರ ಗುಂಪಿನ ಮೇಲೆ ಕಲ್ಲು ತೂರಾಟ

– ಪೊಲೀಸರಿಂದ ಲಘು ಲಾಠಿ ಪ್ರಹಾರ

ಬೆಳಗಾವಿ: ಕೊನೆಗೂ ಅಯೋಧ್ಯೆಯಲ್ಲಿ (Ayodhya) ಭವ್ಯ ರಾಮಮಂದಿರ ನಿರ್ಮಾಣಗೊಂಡಿದೆ. 500 ವರ್ಷಗಳ ಕಾಯುವಿಕೆ ಅಂತ್ಯವಾಗಿದ್ದು, ಕೋಟ್ಯಂತರ ರಾಮಭಕ್ತರ ಕನಸು ನನಸಾಗಿದೆ.

ಜನವರಿ 22ರಂದು ಅಯೋಧ್ಯೆಯಲ್ಲಿ ಬಾಲರಾಮನ (Ramlalla) ಪ್ರಾಣಪ್ರತಿಷ್ಠೆ ಹಿನ್ನೆಲೆಯಲ್ಲಿ ಇಡೀ ದೇಶಾದ್ಯಂತ ರಾಮನ ಭಕ್ತರು ವಿಶೇಷ ಪೂಜಾ ಕೈಂಯರ್ಯಗಳನ್ನು ನೆರವೇರಿಸುವ ಮೂಲಕ ರಾಮನ ಕೃಪೆಗೆ ಪಾತ್ರರಾದರು. ಇದೇ ವೇಳೆ ಬೆಳಗಾವಿಯಲ್ಲಿ (Belagavi) ಜೈಶ್ರೀರಾಮ್ ಘೋಷಣೆ ಕೂಗುತ್ತಾ ಮೆರವಣಿಗೆ ಹೊರಟ್ಟಿದ ಯುವಕರ ಗುಂಪಿನ ಮೇಲೆ ಅನ್ಯ ಗುಂಪೊಂದು ಕಲ್ಲು ತೂರಾಟ ನಡೆಸಿದ ಘಟನೆ ಬೆಳಕಿಗೆ ಬಂದಿದೆ.‌ ಇದನ್ನೂ ಓದಿ: ರೀಲ್ಸ್ ಮಾಡ್ತಾ ಸೋಶಿಯಲ್ ಮೀಡಿಯಾದಲ್ಲಿ ಫುಲ್‌ ಆಕ್ಟೀವ್ ಆಗಿದ್ದ ಶಿಕ್ಷಕಿ – ಸಾವಿನ ಸುತ್ತ ಅನುಮಾನಗಳ ಹುತ್ತ!

ಜೈಶ್ರೀರಾಮ್ (Jai Shri Ram) ಘೋಷಣೆ ಕೂಗುತ್ತಾ ಹೊರಟಿದ್ದ ಯುವಕ ಮೇಲೆ ಅನ್ಯ ಗುಂಪೊಂದು ಕಲ್ಲು ತೂರಾಟ ನಡೆಸಿದೆ. ಬಳಿಕ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದೆ. ಇದರಿಂದ ಕೆಲಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿದೆ. ತಕ್ಷಣವೇ ಕ್ರಮ ಕೈಗೊಂಡ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

ಮುಂಚಿತವಾಗಿಯೇ ಸ್ಥಳದಲ್ಲಿ ಎರಡು ಕೆಎಸ್‌ಆರ್‌ಪಿ ತುಕಡಿಗಳನ್ನ ನಿಯೋಜನೆ ಮಾಡಿದ್ದ ಪೊಲೀಸರು, ಲಾಠಿ ಪ್ರಹಾರ ಮಾಡಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಈ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು, ಪುಂಡರ ವಿರುದ್ಧ ಕ್ರಮ ವಹಿಸಲು ಘಟನಾವಳಿಯ ಸಿಸಿಟಿವಿ ದೃಶ್ಯಗಳನ್ನ ಪರಿಶೀಲಿಸುತ್ತಿದ್ದಾರೆ. ಇದನ್ನೂ ಓದಿ: ಸಾರ್ವಜನಿಕರಿಗೆ ತೆರೆಯುತ್ತಿದ್ದಂತೆಯೇ ರಾಮಮಂದಿರಕ್ಕೆ ಹರಿದು ಬರ್ತಿದೆ ಜನಸಾಗರ!

ಪ್ರಾಣಪ್ರತಿಷ್ಠೆ ಸಂಪನ್ನ: ಅಯೋಧ್ಯೆಯ ರಾಮಮಂದಿರದಲ್ಲಿ ಸೋಮವಾರ ಬಾಲರಾಮನ ಪ್ರಾಣಪ್ರತಿಷ್ಠೆ ಶಾಸ್ತ್ರೋಕ್ತವಾಗಿ ನೆರವೇರಿತು. ಸರಿಯಾಗಿ ಮಧ್ಯಾಹ್ನ 12 ಗಂಟೆ 30 ನಿಮಿಷ 32 ಸೆಕೆಂಡ್‌ಗಳ ಮಧ್ಯೆ ಅಭಿಜಿನ್‌ ಲಗ್ನದಲ್ಲಿ (ಅಭಿಜಿಬ್‌ ಅಂದ್ರೆ ʻವಿಜಯಶಾಲಿʼ ಎಂದರ್ಥ) ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಲಾಯಿತು. ಅರ್ಚಕರು, ಪಂಡಿತರು ಹಾಗೂ ಯಜಮಾನ ಸ್ಥಾನದಲ್ಲಿದ್ದ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಪ್ರಾಣಪ್ರತಿಷ್ಠೆ ನೆರವೇರಿತು. ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌, ಸಿಎಂ ಯೋಗಿ ಆದಿತ್ಯನಾಥ್‌, ಗುಜರಾತ್‌ ರಾಜ್ಯಪಾಲೆ ಆನಂದಿಬೆನ್‌ ಪಟೇಲ್‌ ಮೊದಲಾದವರು ಉಪಸ್ಥಿತರಿದ್ದರು. ದೇವಾಲಯ ಆವರಣದಲ್ಲಿ ಸರಿಸುಮಾರು 8 ಸಾವಿರ ಅತಿಥಿಗಳು ನೆರೆದಿದ್ದರು.