ಬಾಲಕಿ ಮೇಲೆ ಅತ್ಯಾಚಾರ ಎಸಗಿ ಮನೆಯ ಹೊರಗೆ ಎಸೆದ – ಆರೋಪಿ ಅರೆಸ್ಟ್

ಜೈಪುರ: 9ನೇ ತರಗತಿ ವಿದ್ಯಾರ್ಥಿನಿಯನ್ನು ಶಾಲೆಯಿಂದ ಅಪಹರಿಸಿ, ಅತ್ಯಾಚಾರವೆಸಗಿ ಆಕೆಯ ಮನೆಯ ಹೊರಗೆ ಎಸೆದಿರುವ ಘಟನೆ ರಾಜಸ್ಥಾನದ ಡುಂಗರ್‍ಪುರ ಜಿಲ್ಲೆಯ ಬಿಚಿವಾರಾ ಗ್ರಾಮದಲ್ಲಿ ನಡೆದಿದೆ.

ಜನವರಿ 24 ರಂದು ಈ ಘಟನೆ ಸಂಭವಿಸಿದ್ದು, ಆರೋಪಿ ಅಮ್ಜಾರಾ ನಿವಾಸಿಯಾಗಿದ್ದಾನೆ. ಬಾಲಕಿ ತನ್ನ ಸಹೋದರನೊಂದಿಗೆ ಶಾಲೆಗೆ ಹೋಗಿದ್ದಳು. ಊಟದ ವಿರಾಮದ ವೇಳೆ ಆಕೆ ಶಾಲೆಯಿಂದ ಹೊರ ಬಂದಾಗ ಅದೇ ಶಾಲೆಯಲ್ಲಿ ಓದುತ್ತಿದ್ದ 12ನೇ ತರಗತಿ ವಿದ್ಯಾರ್ಥಿಯೊಬ್ಬ ಬಾಲಕಿಯನ್ನು ಬಲವಂತವಾಗಿ ತನ್ನ ಮೋಟಾರ್ ಬೈಕ್‍ನಲ್ಲಿ ಹತ್ತಿಸಿಕೊಂಡು ಅರಣ್ಯ ವ್ಯಾಪ್ತಿ ಪ್ರದೇಶಕ್ಕೆ ಕರೆದೊಯ್ದಿದ್ದಾನೆ. ಇದನ್ನೂ ಓದಿ:  ಸಿದ್ದರಾಮಯ್ಯಗೆ ಮೂಲ ಕಾಂಗ್ರೆಸ್ಸಿಗರ ಟಕ್ಕರ್‌

POLICE JEEP

ಹಲವಾರು ಗಂಟೆಗಳ ಕಾಲ ಅತ್ಯಾಚಾರವೆಸಗಿ ಸಂಜೆ ಅಸ್ವಸ್ಥಗೊಂಡ ಬಾಲಕಿಯನ್ನು ಆಕೆಯ ಮನೆಯ ಹೊರಗೆ ಎಸೆದು ಗಾಯಗೊಳಿಸಿದ್ದಾನೆ. ನಂತರ ತೀವ್ರ ರಕ್ತಸ್ರಾವವಾಗಿದ್ದ ಬಾಲಕಿಯನ್ನು ಆಕೆಯ ಮನೆಯವರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ವೇಳೆ ಕುಟುಂಬಸ್ಥರ ಬಳಿ ಬಾಲಕಿ ನಡೆದ ಘಟನೆಯನ್ನು ವಿವರಿಸಿದ್ದಾಳೆ. ಬಳಿಕ ಆಕೆಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.

ಆರೋಪಿ ವಿರುದ್ಧ ದೂರು ಸ್ವೀಕರಿಸಿದ ಬಿಚ್ಚಿವಾರ ಪೊಲೀಸರು ಐಪಿಸಿ ಮತ್ತು ಪೋಕ್ಸೊ ಕಾಯ್ದೆ ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಂತರ ಬಿಚ್ಚಿವಾಡ ಎಎಸ್‍ಐ ಕೈಲಾಶ್‍ಚಂದ್ ಜಿಲ್ಲಾ ಆಸ್ಪತ್ರೆಗೆ ಆಗಮಿಸಿ ಬಾಲಕಿಯ ಹೇಳಿಕೆ ಪಡೆದುಕೊಂಡಿದ್ದಾರೆ. ಕೂಡಲೇ ಪೊಲೀಸರು ಅದೇ ಶಾಲೆಯಲ್ಲಿ ಓದುತ್ತಿದ್ದ ಆರೋಪಿ ಮತ್ತು ಆತನ ಸ್ನೇಹಿತನನ್ನು ಬಂಧಿಸಿದ್ದಾರೆ. ಸದ್ಯ ಈ ಪ್ರಕರಣ ಕುರಿತಂತೆ ತನಿಖೆಯನ್ನು ಡಿಎಸ್‍ಪಿ ರಾಕೇಶ್ ಕುಮಾರ್ ಶರ್ಮಾ ಅವರು ಕೈಗೆತ್ತಿಕೊಂಡಿದ್ದಾರೆ. ಇದನ್ನೂ ಓದಿ: ಕೂದಲು ರಫ್ತಿಗೆ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

Comments

Leave a Reply

Your email address will not be published. Required fields are marked *