ಬಲಾಢ್ಯರಿಂದ ಕಂದಾಯ ವಸೂಲಿ ಯಾಕಿಲ್ಲ: ಅಧಿಕಾರಿಗಳಿಗೆ ಸಾರ್ವಜನಿಕರಿಂದ ಫುಲ್ ಕ್ಲಾಸ್

ನೆಲಮಂಗಲ: ಗ್ರಾಮ ಪಂಚಾಯತಿ ಅಧಿಕಾರಿಗಳಿಂದ, ಕಂದಾಯ ವಸೂಲಾತಿಯಲ್ಲಿ ತಾರತಮ್ಯ ನಡೆಯುತ್ತಿದೆ ಎಂದು ಸಾರ್ವಜನಿಕರು ಅಧಿಕಾರಿಗಳಿಗೆ ಫುಲ್ ಕ್ಲಾಸ್ ತೆಗೆದುಕೊಂಡಿರುವ ಘಟನೆ ತಾಲೂಕಿನ ಯಂಟಗಾನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ.

ಯಂಟಗಾನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಇಂದು ಅಧಿಕಾರಿಗಳು ಗ್ರಾಮಸಭೆ ಅಯೋಜಿಸಿದ್ದರು. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಸಭೆಯಲ್ಲಿ ಭಾಗವಹಿಸಿ, ಕಂದಾಯ ವಸೂಲಾತಿಯಲ್ಲಿ ಆಗುತ್ತಿರುವ ತಾರತಮ್ಯದ ಕುರಿತು ಅಧಿಕಾರಿಗಳನ್ನು ಹಿಗ್ಗಾಮುಗ್ಗ ತರಾಟೆ ತೆಗೆದುಕೊಂಡಿದ್ದಾರೆ. ಸಾರ್ವಜನಿಕರ ಪ್ರಶ್ನೆಗಳಿಗೆ ಗ್ರಾಮ ಪಂಚಾಯತಿ ಅಧಿಕಾರಿಗಳು ತಬ್ಬಿಬ್ಬಾಗಿದ್ದಾರೆ. ಇದನ್ನೂ ಓದಿ: ಬಿಎಸ್‍ವೈ ಆಪ್ತರಿಗೆ ಸರ್ಕಾರದಲ್ಲಿ ಮಣೆ – ರೇಣುಕಾಚಾರ್ಯ, ಜೀವರಾಜ್ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಮರು ನೇಮಕ

ಕಳೆದ 5 ವರ್ಷದಿಂದ ಕಾರ್ಖಾನೆಗಳ ಕಂದಾಯ ಬಾಕಿ ಇದೆ. ಬಡವರ ಕಂದಾಯ ಬಾಕಿಯಿದ್ದರೆ ಕಟ್ಟುವಂತೆ ಒತ್ತಾಯ ಮಾಡುತ್ತಿರಿ ಬಲಾಢ್ಯರಿಂದ ಕಂದಾಯ ವಸೂಲಿ ಮಾತ್ರ ಯಾಕೆ ಮಾಡಲ್ಲ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ. ಅಲ್ಲದೆ ಈ ವೇಳೆ ಅಧಿಕಾರಿಯಿಂದ ಮೈಕ್ ಕಿತ್ತು ಆಕ್ರೋಶ ಹೊರಹಾಕಿದ್ದಾರೆ. 50 ಸಾವಿರ ಕಂದಾಯ ಕಟ್ಟುವ ಕಂಪನಿಯಿಂದ ಕಂದಾಯ ವಸೂಲಿ ಮಾಡಿಲ್ಲ. ಬಡವರ ಮನೆ ಮುಂದೆ ಬಂದು ಹಣ ಕಟ್ಟುವಂತೆ ಹಿಂಸೆ ಕೊಡುತ್ತಿರಿ ಎಂದು ಪಿಡಿಓ ಅಧಿಕಾರಿ ಪ್ರಶಾಂತ್‍ಗೆ ಗ್ರಾಮಸ್ಥರು ಚಳಿ ಬಿಡಿಸಿದ್ದಾರೆ.  ಇದನ್ನೂ ಓದಿ: ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ ಪ್ರಕರಣ- ಮಗಳ ಸಾವಿನ ಬಗ್ಗೆ ಅನುಮಾನ ಇದೆ ಎಂದ ತಂದೆ

ಗ್ರಾಮಸ್ಥರ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಅಧಿಕಾರಿಗಳು ತಬ್ಬಿಬ್ಬಾಗಿದ್ದಾರೆ. ಪಂಚಾಯತಿಯಿಂದ ಸಮರ್ಪಕವಾಗಿ ಗ್ರಾಮಗಳ ಅಭಿವೃದ್ಧಿ ಮಾಡುತ್ತಿಲ್ಲ. ನಾನಾ ಸಮಸ್ಯೆಗಳನ್ನ ಜನರು ಎದುರಿಸುತಿದ್ದು ಕೂಡಲೇ ಸಮಸ್ಯೆ ಬಗೆಹರಿಸುವಂತೆ ಜನರು ಸಭೆಯಲ್ಲಿ ಆಗ್ರಹಿಸಿದ್ದಾರೆ.

Comments

Leave a Reply

Your email address will not be published. Required fields are marked *