ಮತದಾರರ ಪಟ್ಟಿ ದುರ್ಬಳಕೆ ಹಿಂದೆ ಕಾಂಗ್ರೆಸ್ ಮಾಡಿದ್ದನ್ನೇ ಈಗ ಬಿಜೆಪಿ ಮಾಡುತ್ತಿದೆ: ಹೆಚ್‍ಡಿಕೆ

ರಾಮನಗರ: ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಬಿಜೆಪಿ (BJP) ಅಕ್ರಮವೆಸಗಿದೆ ಎಂಬ ಕಾಂಗ್ರೆಸ್ (Congress) ಆರೋಪಕ್ಕೆ ಸಂಬಂಧಿಸಿದಂತೆ ಹಿಂದೆ ಕಾಂಗ್ರೆಸ್ಸಿಗರು ಮಾಡಿದ ಕೆಲಸವನ್ನು ಇಂದು ಬಿಜೆಪಿಯವರು ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಅಕ್ರಮ ಮಾಡಲು ಖಾಸಗಿ ಸಂಸ್ಥೆಗೆ ಗುತ್ತಿಗೆ ಕೊಟ್ಟಿದ್ದಾರೆ. ಇದು ಮಂತ್ರಿಗಳ ಬೇನಾಮಿ ಹೆಸರಿನಲ್ಲಿ ಇರುವ ಕಂಪನಿ ಎಂದು ಪರೋಕ್ಷವಾಗಿ ಅಶ್ವಥ್ ನಾರಾಯಣ (Dr. Ashwathnarayan) ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಕಿಡಿಕಾರಿದ್ದಾರೆ.

ASHWATH NARAYAN 1

ಚನ್ನಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೇನಾಮಿ ಹೆಸರಿನಲ್ಲಿ ಮಲ್ಲೇಶ್ವರಂನಲ್ಲಿ ಇರುವ ಕಂಪನಿ ಅದು. ಹಿಂದೆ ಬಿಬಿಎಂಪಿಯಲ್ಲಿ ಅಕ್ರಮ ನಡೆದಿತ್ತು. ಅದಕ್ಕೆ ಸಂಬಂಧಿಸಿದ ಕಡತಗಳಿಗೆ ಇದೇ ಕಂಪನಿ ರಾತ್ರೋರಾತ್ರಿ ಬೆಂಕಿ ಇಟ್ಟಿತ್ತು. ಹಿಂದೆ ಕಾಂಗ್ರೆಸ್‍ನವರು ಇಂತಹ ಹಲವು ಚಟುವಟಿಕೆಗಳಲ್ಲಿ ಶಾಮೀಲಾಗಿದ್ದಾರೆ. ಈಗ ದೊಡ್ಡದಾಗಿ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಮುಂದೆ ನಮ್ಮದೇ ಸರ್ಕಾರ ಬರುತ್ತೆ: ಹೆಚ್‍ಡಿಕೆ

ಮುಂದೆ ಕಾಂಗ್ರೆಸ್‍ನವರು ಅಧಿಕಾರಕ್ಕೆ ಬಂದರೂ ಇಂಥದ್ದೇ ಕೆಲಸಗಳನ್ನು ಮುಂದುವರಿಸುತ್ತಾರೆ. ಇವಿಎಂ (EVM) ಇರುವವರೆಗೆ ಬಿಜೆಪಿಗೆ ಯಾವುದೇ ಸಮಸ್ಯೆ ಇಲ್ಲ. ಈ ಬಗ್ಗೆ ಸ್ವತಃ ತೆಲಂಗಾಣ ಸಿಎಂ ಮಾತನಾಡಿದ್ದಾರೆ. ಅಕ್ರಮದ ರೀತಿಯಲ್ಲೇ ಮತ್ತೆ ಅಧಿಕಾರಕ್ಕೆ ಬರಲು ಬಿಜೆಪಿ ಪ್ರಯತ್ನಿಸುತ್ತಿದೆ. ಇದರ ಬಗ್ಗೆ ನಾನು ಹೆಚ್ಚಾಗಿ ತಲೆ ಕೆಡಿಸಿಕೊಳ್ಳುವುದಿಲ್ಲ. ಎರಡೂ ರಾಷ್ಟ್ರೀಯ ಪಕ್ಷಗಳ ಬಗ್ಗೆ ಜನರು ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಮತದಾರರ ಪಟ್ಟಿ ಪರಿಷ್ಕರಣೆ ಹಗರಣದಲ್ಲಿ CM ಸೇರಿ ಬಿಜೆಪಿಯ ಹಿರಿಯ ಸಚಿವರೆಲ್ಲರೂ ಭಾಗಿಯಾಗಿದ್ದಾರೆ: ಸಿದ್ದರಾಮಯ್ಯ

ಸಚಿವ ಅಶ್ವಥ್ ನಾರಾಯಣ ವಿರುದ್ಧ ನಾನು ಸಾಫ್ಟ್ ಆಗಿಲ್ಲ. ಬಿಜೆಪಿ ಎಷ್ಟೇ ಕುತಂತ್ರ ಮಾಡಿದರೂ ಅಧಿಕಾರಕ್ಕೆ ಬರಲು ಆಗುವುದಿಲ್ಲ. ಮುಂದೆ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ. ಆಗ ಅಕ್ರಮ ಎಸಗಿರುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *