ಕೋವಿಡ್ 19 ತಡೆಗೆ ಸಿಎಂ ತುರ್ತು ಸಭೆ: ಮಹತ್ವದ ನಿರ್ಣಯಗಳನ್ನು ಕೈಗೊಂಡ ಬಿಎಸ್‍ವೈ

ಬೆಂಗಳೂರು: ಇಂದು ಬೆಳಗ್ಗೆ 6 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕೋವಿಡ್ 19 ಕುರಿತಂತೆ ಖ್ಯಾತ ವೈದ್ಯ ಡಾ. ದೇವಿ ಶೆಟ್ಟಿ ಹಾಗೂ ಟಾಸ್ಕ್ ಫೋರ್ಸ್ ನ ಸಚಿವರೊಂದಿಗೆ ತುರ್ತು ಸಭೆ ನಡೆಸಿದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರು ಸಹ ಭಾಗವಹಿಸಿದ್ದರು. ಕೊರೊನಾ ನಿಯಂತ್ರಣಕ್ಕೆ ತರಲು ಈ ತುರ್ತು ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯ್ತು.

ಸಭೆಯ ಪ್ರಮುಖ ತೀರ್ಮಾನಗಳು:
1. ಮುಂದಿನ ಆದೇಶದವರೆಗೆ ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ ಮತ್ತು ಇತರ ಎಲ್ಲ ಪರೀಕ್ಷೆಗಳ ಮುಂದೂಡಿಕೆ
2. ಎಸ್ ಎಸ್ ಎಲ್ ಸಿ ಪರೀಕ್ಷೆ ಮತ್ತು ಇತರ ಎಲ್ಲಾ ಪರೀಕ್ಷೆ ಮುಂದೂಡಿಕೆ
3. ರಾಜ್ಯದ ಎಲ್ಲಾ ಗಡಿ ಭಾಗ ಬಂದ್ ಮಾಡಲು ತೀರ್ಮಾನ

4. 1700 ಹಾಸಿಗೆಯ ವಿಕ್ಟೋರಿಯಾ ಆಸ್ಪತ್ರೆಯನ್ನು ಕೊವಿಡ್ 19 ಗೆ ಮಾತ್ರ ಪರಿವರ್ತಿಸಲು ತೀರ್ಮಾನ
5. ಐಸಿಎಂಆರ್ ಮತ್ತು ಎನ್‍ಐವಿ ಸಹಕಾರದೊಂದಿಗೆ ಸರ್ಕಾರಿ ಮತ್ತು ಸರ್ಕಾರೇತರ ಆಸ್ಪತ್ರೆಗಳಿಗೂ ಕೊವಿಡ್ ತಪಾಸಣೆಗೆ ಪರವಾನಿಗೆ ಕೊಡಿಸಲು ಕ್ರಮ
6. ಲ್ಯಾಬ್ ಟೆಸ್ಟ್ ಗಳ ಪ್ರಮಾಣ ಹೆಚ್ಚಿಸಲು ಕ್ರಮ

7. ಸ್ಥಳೀಯ ವಿಮಾನ ಪ್ರಯಾಣಿಕರಿಗೂ ತಪಾಸಣೆ ಕಡ್ಡಾಯಗೊಳ್ಳಲು ತೀರ್ಮಾನ
8. ಎಲ್ಲಾ ಚುನಾವಣೆಗಳ ಮುಂದುಡಿಕೆ
9. ಬಾಲ್ ಬ್ರೂಯಿ ಅತಿಥಿ ಗೃಹವನ್ನ ಕೊರೊನಾ ವಾರ್ ರೂಂ ಆಗಿ ಪರಿವರ್ತನೆ

10. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಎಲ್ಲಾ ಕಾರ್ಯಗಳು ನಡೆಯಲಿವೆ
11. ಎರಡು ತಿಂಗಳ ಪಡಿತರ ಒದಗಿಸಲು ಕ್ರಮ
12. ಮುಂದಿನ 15 ದಿನ ನಗರದಿಂದ ಯಾರು ಹಳ್ಳಿಗಳಿಗೆ ಹೋಗದಂತೆ ಮುಖ್ಯಮಂತ್ರಿಗಳ ಮನವಿ
13. ಜೀವನಾವಶ್ಯಕ ವಸ್ತುಗಳ ಕೊರತೆಯಾಗದಂತೆ ಕ್ರಮ

Comments

Leave a Reply

Your email address will not be published. Required fields are marked *