ಎಷ್ಟೋ ಜನ ಮುಸ್ಲಿಮರು ಲಿಂಗಾಯತರಾದ್ರು, ನಾವೇನಾದ್ರೂ ಮಾತಾಡಿದ್ವಾ: ಸಿ.ಎಂ ಇಬ್ರಾಹಿಂ

ಬೆಂಗಳೂರು: ಎಷ್ಟೋ ಜನ ಮುಸ್ಲಿಮರು ಲಿಂಗಾಯತರಾದರು ಆಗ ನಾವೇನಾದರೂ ಮಾತನಾಡಿದ್ವಾ ಎಂದು ಪ್ರಶ್ನಿಸುವ ಮೂಲಕ ಮತಾಂತರ ನಿಷೇಧ ಮಸೂದೆಗೆ ಕಾಂಗ್ರೆಸ್ ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ  ವಿರೋಧ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಸೆಂಬ್ಲಿಯಲ್ಲಿ ಮತಾಂತರ ನಿಷೇಧ ತಡೆ ಬಿಲ್ ಬರುತ್ತಿದೆ. ಬಲವಂತವಾಗಿ ಮತಾಂತರ ಮಾಡಬಾರದು ಅಂತ ಸಂವಿಧಾನದಲ್ಲೇ ಇದೆ. ಹಾಗಿದ್ದರೂ ಈ ಮಸೂದೆಯನ್ನು ಯಾಕೆ ತರುತ್ತಿದ್ದಾರೆ? ಇದರರ್ಥ ಸರ್ಕಾರ ಎಲ್ಲದರಲ್ಲೂ ವಿಫಲವಾಗುತ್ತಿದೆ. ಜನರ ಗಮನ ಬೇರೆ ಕಡೆ ಸೆಳೆಯಲು ಬೊಮ್ಮಾಯಿ ಮೂಲಕ ಮಸೂದೆ ಮಂಡನೆ ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದರು.  ಇದನ್ನೂ ಓದಿ: ಬಡತನಕ್ಕೆ, ಆಸೆ ಆಮಿಷಕ್ಕೆ ಮತಾಂತರ ಆಗೋದು ತಪ್ಪು : ಬೊಮ್ಮಾಯಿ

basavaraj bommai

ಮತಾಂತರವನ್ನು ಯಾರೂ ಬಲವಂತವಾಗಿ ಮಾಡಬಾರದು. ಸ್ವಯಿಚ್ಚೆಯಿಂದ ಬೇಕಾದರೆ ಮತಾಂತರವಾಗಲಿ. ಎಷ್ಟೋ ಜನ ಮುಸ್ಲಿಮರು ಲಿಂಗಾಯತರಾದರು. ಆಗ ನಾವೇನಾದರೂ ಮಾತಾಡಿದೆವಾ? ರಿಜ್ವಿ ಹಿಂದೂ ಆದ, ನಾವು ಏನಾದರೂ ಹೇಳಿದ್ವಾ? ಮತಾಂತರ ಅವರವರ ಇಚ್ಛೆ. ಅದಕ್ಕಾಗಿ ಒಂದು ಮಸೂದೆ ತರುವ ನಾಟಕ ಎಲ್ಲ ಯಾಕೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಬಿಡ್ಡನ ಅಡ್ಡಾದಲ್ಲಿ ಕಾಣಿಸಿಕೊಂಡ ವಾರ್ನರ್: ನೀನು ಚೆನ್ನಾಗಿದ್ದೀಯಾ ತಾನೇ ಎಂದು ಕಾಲೆಳೆದ ಕೊಹ್ಲಿ

Comments

Leave a Reply

Your email address will not be published. Required fields are marked *