ಸಿದ್ದರಾಮಯ್ಯ ಹಾದಿಯಲ್ಲಿ ಸಿಎಂ ಕುಮಾರಸ್ವಾಮಿ

ಮಂಡ್ಯ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಾದಿಯಲ್ಲಿಯೇ ಹಾಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸಾಗುತ್ತಿದ್ದು, ಹೆಂಗಳೆಯರ ಜೊತೆ ಸೆಲ್ಫಿಗೆ ಪೋಸ್ ಕೊಟ್ಟಿದ್ದಾರೆ.

ಸಿದ್ದರಾಮಯ್ಯ ಅವರು ಎಲ್ಲಿ ಹೋದರು ಮಹಿಳೆಯರು ಮುಗಿಬಿದ್ದು, ಅವರ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳುತ್ತಿದ್ದರು. ಈಗ ಇವರ ಹಾದಿಯಂತೆ ಸಿಎಂ ಕುಮಾರಸ್ವಾಮಿ ಅವರು ಎಲ್ಲಿ ಹೋದರು ಜನರು ಸೆಲ್ಫಿಗೆ ಮುಗಿಬೀಳುತ್ತಿದ್ದಾರೆ.

ವಿದ್ಯಾರ್ಥಿನಿಯರ ಜೊತೆ ಸಿಎಂ ಕುಮಾರಸ್ವಾಮಿ

ಬುಧವಾರ ಸಿಎಂ ಕುಮಾರಸ್ವಾಮಿ ಅವರು ಮಂಡ್ಯದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿದ್ದರು, ಈ ವೇಳೆ ಸಭೆಯ ಬಳಿಕ ಕುಮಾರಸ್ವಾಮಿ ಹೊರ ಬರುತ್ತಿದ್ದಂತೆ ಅವರ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮಹಿಳೆಯರು ತಾ ಮುಂದು ನಾ ಮುಂದು ಅಂತ ನೂಕಾಟಕ್ಕೆ ಮುಂದಾಗಿದ್ದರು. ಕುಮಾರಸ್ವಾಮಿ ಅವರು ಆಯ್ತ ಆಯ್ತ ಅಂತ ಹೇಳುತ್ತಿದ್ದರು ಮಹಿಳೆಯರು ಮಾತ್ರ ಡಿಫರೆಂಟಾಗಿ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ.

ಇದೇ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಮ್ಮ ಸರ್ಕಾರದಲ್ಲಿ ಯಾವುದೇ ಕಾರಣಕ್ಕೂ ಮದ್ಯದ ಅಂಗಡಿ ತೆರೆಯಲು ಅವಕಾಶ ನೀಡಲ್ಲ. ಅಲ್ಲದೇ 20 ಸಾವಿರ ಜನಸಂಖ್ಯೆ ಒಂದು ಅಂಗಡಿಯಂತೆ ಎಂಬುದು ನಮ್ಮ ಸರ್ಕಾರದ ನಿಯಮವಲ್ಲ. ಇದು 25 ವರ್ಷದ ಹಿಂದಿನ ನಿಯಮ. ಆರ್ಥಿಕ ಇಲಾಖೆಯ ಅಧಿಕಾರಿಗಳನ್ನು ಕೇಳಿದ್ದೇನೆ, ಅವರು ಅಬಕಾರಿ ಇಲಾಖೆಗೆ ಯಾವುದೇ ಪ್ರಸ್ತಾವನೆ ಸಲ್ಲಿಸಿಲ್ಲ ಎಂಬುದಾಗಿ ಹೇಳಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *