ಬೆಂಗಳೂರು: ಆಪರೇಷನ್ ಆಡಿಯೋ ತನಿಖೆಯನ್ನು ಬಿಜೆಪಿಯವರ ನೇತೃತ್ವದಲ್ಲೇ ಮಾಡಿಸೋಣ ಎಂದು ಸಿಎಂ ಕುಮಾರಸ್ವಾಮಿ ಅವರು, ನಗುತ್ತಲೇ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಗೆ ಟಾಂಗ್ ಕೊಟ್ಟಿದ್ದಾರೆ.
ಭೋಜನ ವಿರಾಮ ಮುಗಿಸಿಕೊಂಡು ಕಲಾಪಕ್ಕೆ ತೆರಳುವ ಮುನ್ನ ಮಾತನಾಡಿದ ಅವರು, ಎಸ್‍ಐಟಿಯಿಂದ ಆಪರೇಷನ್ ಆಡಿಯೋ ವಿಚಾರಣೆ ಬೇಡವೆಂದು ಬಿಜೆಪಿಯವರು ಪಟ್ಟು ಹಿಡಿದಿದ್ದಾರೆ. ಹೀಗಾಗಿ ಸೂಕ್ತ ರೀತಿಯ ತನಿಖೆ ಮಾಡಿಸೋಣ ಬಿಡಿ ಎಂದು ವ್ಯಂಗ್ಯವಾಡಿದರು. ಇದನ್ನು ಓದು: ಆಪರೇಷನ್ ಆಡಿಯೋ ಪ್ರಕರಣ – ಎಸ್‍ಐಟಿ ತನಿಖೆ ವಹಿಸಿಕೊಂಡರೆ ತನಿಖೆ ಹೇಗೆ ನಡೆಯುತ್ತೆ?

ಈ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಖೆಡ್ಡಾ ತೋಡಲು ಸಿಎಂ ಕುಮಾರಸ್ವಾಮಿ ಭಾರೀ ಸಿದ್ಧತೆ ನಡೆಸುತ್ತಿದ್ದಾರೆ. ಮತ್ತೆ ಆಪರೇಷನ್ ಕಮಲಕ್ಕೆ ಕೈ ಹಾಕದಂತೆ ಕಟ್ಟಿ ಹಾಕಲು ಇದೇ ಸರಿಯಾದ ಸಮಯ ಎಂದು ಮೈತ್ರಿ ನಾಯಕರು ಪ್ಲಾನ್ ಮಾಡಿದ್ದಾರೆ. ಹೀಗಾಗಿ ಆಪರೇಷನ್ ಆಡಿಯೋ ಪ್ರಕರಣದ ತನಿಖೆಯನ್ನು ಎಸ್‍ಐಟಿಗೆ ಒಪ್ಪಿಸಲು ದೋಸ್ತಿ ಸರ್ಕಾರ ಮುಂದಾಗಿದೆ ಎನ್ನುವುದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply