ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರನ್ನ ರಂಜಿಸಿದ್ದ ನಟಿ- ಲೀಲಾವತಿ ನಿಧನದ ಬಗ್ಗೆ ಸಿಎಂ ಸಂತಾಪ

ಹಿರಿಯ ನಟಿ ಲೀಲಾವತಿ (Leelavathi) ನಿಧನಕ್ಕೆ ಸಿಎಂ ಸಿದ್ದರಾಮಯ್ಯ (Cm Siddaramaiah) ಅವರು ಸಂತಾಪ ಸೂಚಿಸಿದ್ದಾರೆ. ಇಂದು ಲೋ ಬಿ ಪಿ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಿಸಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಲೀಲಾವತಿ ವಿಧಿವಶರಾಗಿದ್ದಾರೆ. ಲೀಲಾವತಿ ಅವರ ನಿಧನಕ್ಕೆ ಸಿಎಂ ಸಂತಾಪ ವ್ಯಕ್ತಪಡಿಸಿದ್ದಾರೆ.

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ನೋವುಂಟು ಮಾಡಿದೆ. ಕಳೆದ ವಾರವಷ್ಟೇ ಅವರು ಅನಾರೋಗ್ಯಕ್ಕೀಡಾದ ವಿಚಾರ ತಿಳಿದು ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಪುತ್ರ ವಿನೋದ್ ರಾಜ್ ಕುಮಾರ್ ಅವರೊಂದಿಗೆ ಮಾತನಾಡಿದ್ದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಸಿಎಂ ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಕನ್ನಡದ ಹೆಸರಾಂತ ನಟಿ ಲೀಲಾವತಿ ನಿಧನ

ಹಲವು ದಶಕಗಳ ಕಾಲ ತಮ್ಮ ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಲೀಲಾವತಿ ಅವರು ಗುಣಮುಖರಾಗಿ ಇನ್ನಷ್ಟು ಕಾಲ ನಮ್ಮ ನಡುವೆ ಇರುತ್ತಾರೆಂಬ ನನ್ನ ನಂಬಿಕೆ ಹುಸಿಯಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.